Home ಸುದ್ದಿಗಳು ಕಾಬೂಲ್‌ನಲ್ಲಿ ಆತ್ಮಾಹುತಿ ಬಾಂಬ್ ದಾಳಿ: ನಿರಾಶ್ರಿತರ ಸಚಿವ ಖಲೀಲ್ ಹಕ್ಕಾನಿ ಸಾವು

ಕಾಬೂಲ್‌ನಲ್ಲಿ ಆತ್ಮಾಹುತಿ ಬಾಂಬ್ ದಾಳಿ: ನಿರಾಶ್ರಿತರ ಸಚಿವ ಖಲೀಲ್ ಹಕ್ಕಾನಿ ಸಾವು

0
ಕಾಬೂಲ್‌ನಲ್ಲಿ ಆತ್ಮಾಹುತಿ ಬಾಂಬ್ ದಾಳಿ: ನಿರಾಶ್ರಿತರ ಸಚಿವ ಖಲೀಲ್ ಹಕ್ಕಾನಿ ಸಾವು

ಕಾಬೂಲ್‌: ಕಾಬೂಲ್‌ನಲ್ಲಿ ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ತಾಲಿಬಾನ್ ನಿರಾಶ್ರಿತರ ಸಚಿವ ಖಲೀಲ್ ಉರ್-ರಹಮಾನ್ ಹಕ್ಕಾನಿ ಹಾಗೂ ಇತರ ಇಬ್ಬರು ಮೃತಪಟ್ಟಿದ್ದಾರೆ.

ಸಚಿವಾಲಯದ ಆವರಣದಲ್ಲೇ ಸ್ಫೋಟ ಸಂಭವಿಸಿದ್ದು, ನಿರಾಶ್ರಿತರ ಸಚಿವ ಖಲೀಲ್ ಹಕ್ಕಾನಿ ಹತರಾಗಿದ್ದಾರೆ.

ಇವರು ತಾಲಿಬಾನ್ ಆಡಳಿತದಲ್ಲಿ ಮತ್ತೊಬ್ಬ ಪ್ರಭಾವಿ ನಾಯಕನಾಗಿರುವ ಗೃಹ ಸಚಿವ ಸಿರಾಜುದ್ದೀನ್ ಹಕ್ಕಾನಿಯವರ ಚಿಕ್ಕಪ್ಪ. ಈ ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಸದ್ಯಕ್ಕೆ ಹೊತ್ತುಕೊಂಡಿಲ್ಲ.

ಇದು ಮೂರು ವರ್ಷಗಳ ಹಿಂದೆ ಅಧಿಕಾರಕ್ಕೆ ಮರಳಿದ ನಂತರ ತಾಲಿಬಾನ್ ಹಿರಿಯ ಅಧಿಕಾರಿ ಮೇಲಿನ ಅತ್ಯಂತ ಮಹತ್ವದ ದಾಳಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here