Home ಸುದ್ದಿಗಳು ಪತಿ ಪತ್ನಿಯ ನಡುವೆ ಜಗಳ: ಗಂಭೀರವಾಗಿ ಗಾಯಗೊಂಡ ಪತ್ನಿ ಸಾವು

ಪತಿ ಪತ್ನಿಯ ನಡುವೆ ಜಗಳ: ಗಂಭೀರವಾಗಿ ಗಾಯಗೊಂಡ ಪತ್ನಿ ಸಾವು

0
ಪತಿ ಪತ್ನಿಯ ನಡುವೆ ಜಗಳ: ಗಂಭೀರವಾಗಿ ಗಾಯಗೊಂಡ ಪತ್ನಿ ಸಾವು

ವಿಟ್ಲ: ಪತಿ ಪತ್ನಿಯ ಜಗಳದ ನಡುವೆ ಪತ್ನಿಯನ್ನು ದೂಡಿ ಹಾಕಿ, ಗಂಭೀರ ಗಾಯಗೊಂಡು ಮಹಿಳೆ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ದೇವಿನಗರ ನಿವಾಸಿ ಲೀಲಾ (45) ಎಂದು ಗುರುತಿಸಲಾಗಿದೆ.

ಪ್ರತಿದಿನ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಸಂಜೀವ, ಮೊನ್ನೆ ಕೂಡ ಗಲಾಟೆ ಮಾಡಿ ಹೆಂಡತಿಯನ್ನು ದೂಡಿ ಹಾಕಿದ್ದಾನೆ ಎಂಬ ಮಾಹಿತಿ ಸ್ಥಳೀಯರಿಂದ ತಿಳಿದು ಬಂದಿದೆ.

ಮಾಹಿತಿ ತಿಳಿದ ಸ್ಥಳೀಯರು ಕೂಡಲೇ ಮಹಿಳೆಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದರು. ಡಿ.12ರ ಗುರುವಾರ ಲೀಲಾ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿ ಸಂಜೀವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

LEAVE A REPLY

Please enter your comment!
Please enter your name here