
ಉಡುಪಿ: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಅಲೆವೂರು – ಮಣಿಪಾಲ ರಸ್ತೆಯ ಶಾಂತಿನಗರದ ಬಳಿ ತಿರುವಿನಲ್ಲಿ ನಡೆದಿದೆ.
ಕಾರವಾರ ಮೂಲದ ಬೈಕ್ ಸವಾರ ಮೃತಪಟ್ಟರೆ ಸಹಸವಾರ ಹಿರಿಯಡ್ಕ ಪರಿಸರದ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ವೇಳೆ ಓರ್ವ ವ್ಯಕ್ತಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಸ್ಥಳಕ್ಕೆ ಮಣಿಪಾಲ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.
