Home ಸುದ್ದಿಗಳು ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ: ಆರೋಪಿಗಳಿಗಾಗಿ ತೀವ್ರ ಹುಡುಕಾಟ

ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ: ಆರೋಪಿಗಳಿಗಾಗಿ ತೀವ್ರ ಹುಡುಕಾಟ

0
ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ: ಆರೋಪಿಗಳಿಗಾಗಿ ತೀವ್ರ ಹುಡುಕಾಟ

ಬೆಂಗಳೂರು: ದೇಶದೆಲ್ಲೆಡೆ ಸಂಚಲನ ಮೂಡಿಸಿದ ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಮಾರತ್ತಹಳ್ಳಿ ಪೊಲೀಸರು ನಡೆಸುತ್ತಿದ್ದು, ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಟೆಕ್ಕಿ ಅತುಲ್ ಮಾರತ್ತಹಳ್ಳಿ ಮಂಜುನಾಥ್ ಲೇಔಟ್‌ನ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದರು.

ಡೆತ್ ನೋಟ್‌ನಲ್ಲಿ ನನ್ನ ಸಾವಿಗೆ ನನ್ನ ಪತ್ನಿ ನಿಖಿತಾ ಹಾಗೂ ಆಕೆಯ ತಾಯಿ, ಸಹೋದರ ಕಾರಣ ಎಂದು ಬರೆದಿಟ್ಟಿದ್ದರು. ಟೆಕ್ಕಿ ಅತುಲ್ ಸಾವಿಗೆ ಕಾರಣವಾಗಿರೋ ಆರೋಪ ಎದುರಿಸುತ್ತಿರೋ ಆರೋಪಿಗಳನ್ನು ಮಾರತ್ತಹಳ್ಳಿ ಪೊಲೀಸರು ಉತ್ತರ ಪ್ರದೇಶದಲ್ಲಿ ಹುಡುಕಾಟ ನಡೆಸುತ್ತಿದ್ದು, ಇಬ್ಬರನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದಾರೆ.

ಇನ್ನು ಪ್ರಕರಣ ಪ್ರಮುಖ ಆರೋಪಿಯಾಗಿರುವ ಮೃತ ಅತುಲ್ ಪತ್ನಿ ನಿಖಿತಾ ಬೆಂಗಳೂರು ಪೊಲೀಸರು ಉತ್ತರ ಪ್ರದೇಶಕ್ಕೆ ಬಂದಿರುವ ವಿಚಾರ ತಿಳಿದು ಊರು ಬಿಟ್ಟು ಹೋಗಿದ್ದಾಳೆ.

ಹಾಗಾಗಿ ಮಾರತ್ತಹಳ್ಳಿ ಪೊಲೀಸರು ಸ್ಥಳೀಯ ಪೊಲೀಸರ ಸಹಾಯ ಪಡೆದು ಉತ್ತರ ಪ್ರದೇಶದಲ್ಲಿರುವ ಆರೋಪಿ ನಿಖಿತಾ ಮನೆಗೆ ಹೋಗಿ ನೋಟಿಸ್ ಹಾಗೂ ಎಫ್‌ಐಆರ್ ಅಂಟಿಸಿ ಬಂದಿದ್ದಾರೆ.

ನೋಟಿಸ್‌ನಲ್ಲಿ ಮುಂದಿನ ಮೂರು ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಒಂದು ವೇಳೆ ಆರೋಪಿತ ಮಹಿಳೆ ಪೊಲೀಸರ ಮುಂದೆ ಹಾಜರಾಗದೆ ಹೋದರೆ ಬಹುತೇಕ ನಿಖಿತಾಳನ್ನು ಬಂಧಿಸಿ ಬೆಂಗಳೂರಿಗೆ ಕರೆ ತರಲು ಮಾರತ್ತಹಳ್ಳಿ ಪೊಲೀಸರು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.

 

LEAVE A REPLY

Please enter your comment!
Please enter your name here