
ಬೆಂಗಳೂರು: ದೇಶದೆಲ್ಲೆಡೆ ಸಂಚಲನ ಮೂಡಿಸಿದ ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಈಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಹೆಂಡತಿ ಹಾಗೂ ಮಾವನ ಕಿರುಕುಳಕ್ಕೆ ಬೇಸತ್ತು ಹೆಡ್‌ಕಾನ್‌ಸ್ಟೇಬಲ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೆಚ್.ಸಿ.ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಪೊಲೀಸ್. ಇವರು ಹುಳಿಮಾವು ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿ ಕೆಲಸ ಮಾಡಿಕೊಂಡಿದ್ದರು.
ನಾನು ನನ್ನ ಹೆಂಡತಿಯ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಹೆಂಡತಿಯ ತಂದೆಯಾದ ಯಮುನಪ್ಪ ಇವನು ನನಗೆ ಜೀವ ಬೆದರಿಕೆ ಹಾಕಿರುತ್ತಾನೆ. ಡಿ.12 ರಂದು ದೂರವಾಣಿ ಕರೆ ಮಾಡಿ ಮಾತನಾಡಿ ಬೆದರಿಕೆ ಹಾಕಿರುತ್ತಾನೆ.
ಬೆಳಗ್ಗೆ ನಾನು ಕಾಲ್ ಮಾಡಿದಾಗಲೂ ಕೂಡ, ‘ನೀನು ಸತ್ತು ಹೋಗು ನನ್ನ ಮಗಳು ಚೆನ್ನಾಗಿರುತ್ತಾಳೆ’ ಎಂದು ಹೇಳಿ ಅವಾಚ್ಯ ಪದಗಳಿಂದ ಬೈದಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.
ಈ ಘಟನೆ ಸಂಬಂಧ ಬೈಯ್ಯಪ್ಪನಹಳ್ಳಿ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
