
ಮಂಗಳೂರು: ವಕ್ಫ್ ಆಸ್ತಿ ಅಕ್ರಮದ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಿದ ಬಳಿಕ ಪ್ರಕರಣವನ್ನು ಮುಚ್ಚಿಹಾಕುವ ನಿಟ್ಟಿನಲ್ಲಿ ಕೋಟ್ಯಂತರ ರೂ. ಲಂಚ ಕೊಡಲು ಕಾಂಗ್ರೆಸ್ ಮುಖಂಡರೇ ಬಂದಿದ್ದರು ಎಂದು ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂಮಿ ಕಬಳಿಕೆ ಆಗದ ರೀತಿಯಲ್ಲಿ ವಕ್ಫ್ ಕಾಯ್ದೆಯಲ್ಲಿ ತಿದ್ದುಪಡಿ ತರಬೇಕು ಎಂದು ನಾನೇ ವರದಿಯಲ್ಲಿ ಕೇಳಿಕೊಂಡಿದ್ದೆ. ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನ ವಹಿಸಲು ಬಿ.ವೈ. ವಿಜಯೇಂದ್ರ ಅವರು 150 ಕೋಟಿ ರೂ. ಆಮಿಷ ಒಡ್ಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ ಆರೋಪ ಸುಳ್ಳು ಎಂದರು.
2019ರಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದಾಗ, ವಿಜಯೇಂದ್ರ ಬಿಜೆಪಿ ಪಕ್ಷದ ಉಪಾಧ್ಯಕ್ಷರಾಗಿದ್ದಾಗ ಈ ವಿಷಯವಾಗಿ ಅವರನ್ನು ಭೇಟಿಯಾಗಿದ್ದೆ. ಸರಕಾರ ತನಿಖೆ ಮಾಡಬೇಕೆಂದು ವಿಜಯೇಂದ್ರ ಅವರನ್ನು ಆಗ್ರಹಿಸಿದ್ದೆ. ಆದರೆ ಅವರು ಯಾವುದೇ ಹಣದ ಆಮಿಷ ಒಡ್ಡಿಲ್ಲ ಎಂದು ಸ್ಪಷ್ಟ ಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದಂತೆ ಸಿಬಿಐ ತನಿಖೆಗೆ ವಹಿಸಿದರೆ ಎಲ್ಲವೂ ಹೊರಬರುತ್ತದೆ ಎಂದರು.
