Home ಸುದ್ದಿಗಳು ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌: ಐವರು ಉಗ್ರರ ಹತ್ಯೆ

ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌: ಐವರು ಉಗ್ರರ ಹತ್ಯೆ

0
ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌: ಐವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಐವರು ಉಗ್ರರು ಹತರಾಗಿದ್ದು, ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ.

ಕುಲ್ಗಾಮ್ ಜಿಲ್ಲೆಯ ಬೆಹಿಬಾಗ್ ಪ್ರದೇಶದ ಕಡ್ಡರ್‌ನಲ್ಲಿ ಶಂಕಿತ ಭಯೋತ್ಪಾದಕರು ಇರುವ ಬಗ್ಗೆ ಗುಪ್ತಚರ ಮಾಹಿತಿ ಬಂದಿದ್ದು, ಭದ್ರತಾ ಪಡೆ ಸಿಬ್ಬಂದಿ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.

ಗುರುವಾರ ಮುಂಜಾನೆ ಭಯೋತ್ಪಾದಕರು ಏಕಾಏಕಿ ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ಚಕಮಕಿ ನಡೆಸಿ ಐವರು ಉಗ್ರರನ್ನು ಹೊಡೆದುರುಳಿಸಿದ್ದು, ಈ ವೇಳೆ ಇಬ್ಬರು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ.

ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಭಾರತೀಯ ಸೇನೆಯ ತಿಳಿಸಿದೆ.

 

LEAVE A REPLY

Please enter your comment!
Please enter your name here