
ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ವ್ಯಕ್ತಿಯೋರ್ವ ಯುವತಿಯರ ಅಂಗಾಂಗಗಳ ವಿಡಿಯೋ ಹಾಗೂ ಫೋಟೋ ತೆಗೆಯುತ್ತಿದ್ದ ಘಟನೆ ಜಯನಗರದಲ್ಲಿ ನಡೆದಿದೆ.
ಆರೋಪಿಯನ್ನು ಮಹೇಶ್ ಎಂದು ಗುರುತಿಸಲಾಗಿದ್ದು, ಕಾಮುಕನನ್ನು ಮೆಟ್ರೋ ನಿಲ್ದಾಣದ ಸೆಕ್ಯೂರಿಟಿ ಗಾರ್ಡ್‍ಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮೆಟ್ರೋದಲ್ಲಿ ಪ್ರಯಾಣ ಮಾಡುವ ಮಹಿಳೆಯರ ಖಾಸಗಿ ಅಂಗಾಂಗಗಳ ಫೋಟೋ ಹಾಗೂ ವಿಡಿಯೋ ತೆಗೆಯುತ್ತಿದ್ದ. ಆರೋಪಿಯ ಮೊಬೈಲ್‍ನಲ್ಲಿ ಸುಮಾರು 50 ಯುವತಿಯರ ವಿಡಿಯೋ ಮತ್ತು ಫೋಟೋಗಳು ಪತ್ತೆಯಾಗಿವೆ.
ಡಿ.25 ರಂದು ಬೆಳಿಗ್ಗೆ 9 ಗಂಟೆಗೆ ಯುವತಿಯೊಬ್ಬಳು ಮೆಜೆಸ್ಟಿಕ್‍ನಿಂದ ಜೆಪಿ ನಗರ ಮೆಟ್ರೋ ಸ್ಟೇಷನ್‍ಗೆ ಹೋಗ್ತಿದ್ದಳು. ಈ ವೇಳೆ ಯುವಕ, ಯುವತಿಯ ಖಾಸಗಿ ಅಂಗಾಂಗಗಳ ವಿಡಿಯೋ ತೆಗೆಯುತ್ತಿದ್ದನ್ನು ಗಮನಿಸಿ ಆತನಿಗೆ ಹೊಡೆದಿದ್ದಾಳೆ. ಈ ವೇಳೆ ನೈಟ್ ಡ್ಯೂಟಿ ಮುಗಿಸಿ ಮನೆಗೆ ಹೋಗ್ತಿದ್ದ ಇಬ್ಬರು ಸೆಕ್ಯೂರಿಟಿಗಳು ಯುವತಿಯ ಸಹಾಯಕ್ಕೆ ಧಾವಿಸಿದ್ದು, ಈ ವೇಳೆ ಈತನ ಕೃತ್ಯ ಬೆಳಕಿಗೆ ಬಂದಿದೆ.
