
ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಉಲ್ಬಣಗೊಂಡಿರುವ ಆಂತರಿಕ ಕಚ್ಚಾಟದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ.
ಬುಧವಾರ ರಾತ್ರಿ ಅಮಿತ್ ಶಾ ಅವರನ್ನು ವಿಜಯೇಂದ್ರ ಭೇಟಿಯಾಗಿ,ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ತಂಡಕ್ಕೆ ಬ್ರೇಕ್ ಹಾಕಿ ಎಂದು ಮನವಿ ಮಾಡಿದ್ದಾರೆ.
ತಮ್ಮ ಒಂದು ವರ್ಷದ ಸಾಧನೆಯ ವರದಿ ಕೊಡುವ ಮೂಲಕ ಕುತೂಹಲ ಹುಟ್ಟಿಸಿದ್ದಾರೆ. ಯತ್ನಾಳ್ ತಂಡದ ಎರಡನೇ ಹಂತದ ವಕ್ಫ್ ಹೋರಾಟ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತಂದರು.
ಈ ವರ್ಷಾರಂಭದಿಂದ ಪಕ್ಷದ ವತಿಯಿಂದ ಕೈಗೊಳ್ಳಲಿರುವ ಹೋರಾಟಗಳ ಬಗ್ಗೆ ಪ್ರತ್ಯೇಕ ವರದಿ ಕೂಡ ಸಲ್ಲಿಸಿದ್ದಾರೆ. ಸಚಿನ್ ಆತ್ಮಹತ್ಯೆ ಪ್ರಕರಣಕ್ಕೂ ಪ್ರಿಯಾಂಕ್ ಖರ್ಗೆಗೂ ಸಂಬಂಧ ಇರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಪ್ರಕರಣದಲ್ಲಿ ಬಿಜೆಪಿಯ ಹೋರಾಟ, ಕಲಬುರ್ಗಿ ಪ್ರತಿಭಟನೆ ಬಗ್ಗೆಯೂ ತಿಳಿಸಿದ್ದಾರೆ. ಹಾಗೆಯೇ, ಬಾಣಂತಿಯರ ಸರಣಿ ಸಾವು ಪ್ರಕರಣದಲ್ಲಿ ಸರ್ಕಾರದ ಲೋಪಗಳು, ನಿರ್ಲಕ್ಷ್ಯ, ಬಿಜೆಪಿ ಹೋರಾಟ ಕುರಿತೂ ಗಮನ ಸೆಳೆದಿದ್ದಾರೆ.
