Home ಸುದ್ದಿಗಳು ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭಾಂಶದ ಆಮಿಷವೊಡ್ಡಿ ಲಕ್ಷಾಂತರ ರೂ ವಂಚನೆ

ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭಾಂಶದ ಆಮಿಷವೊಡ್ಡಿ ಲಕ್ಷಾಂತರ ರೂ ವಂಚನೆ

0
ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭಾಂಶದ ಆಮಿಷವೊಡ್ಡಿ ಲಕ್ಷಾಂತರ ರೂ ವಂಚನೆ

ಉಡುಪಿ: ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭಾಂಶದ ಆಮಿಷವೊಡ್ಡಿ ಲಕ್ಷಾಂತರ ರೂ.ವಂಚಿಸಿದ ಘಟನೆ ನಡೆದಿದೆ.

ಮೂಡುಬೆಳ್ಳೆಯ ಫ್ರಾನ್ಸಿಸ್‌ ಕ್ಯಾಸ್ತಲಿನೋ ಅವರ ಪುತ್ರ ಮೋಸಹೋಗಿದ ವ್ಯಕ್ತಿ.

ಫ್ರಾನ್ಸಿಸ್‌ ಕ್ಯಾಸ್ತಲಿನೋ ಅವರ ಪುತ್ರನ ಮೊಬೈಲ್‌ ಸಂಖ್ಯೆಯನ್ನು ಯಾರೋ ಅಪರಿಚಿತ ವ್ಯಕ್ತಿಗಳು ಸ್ಟಾಕ್‌ ಮಾರ್ಕೆಟ್‌ ನೇವಿಗೇಶನ್‌ ಎಂಬ ವಾಟ್ಸಾಪ್‌ ಗ್ರೂಪ್‌ ಸೇರಿಸಿದ್ದರು.

ಷೇರು ಮಾರುಕಟ್ಟೆ ಬಗ್ಗೆ ಹಾಗೂ ಲಾಭಾಂಶಗಳ ಬಗ್ಗೆ ಮಾಹಿತಿ ತಿಳಿಸಿ ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ, ಹಣ ಹೂಡಿಕೆ ಮಾಡಲು ತಿಳಿಸಿದ್ದರು. ಅದರಂತೆ ಅವರು ಅಪರಿಚಿತರು ಸೂಚಿಸಿದ ಬ್ಯಾಂಕ್‌ ಖಾತೆಗೆ 2025 ಡಿ.30ರಿಂದ ಹಂತಹಂತವಾಗಿ ಒಟ್ಟು 49 ಲ.ರೂ.ಗಳನ್ನು ಹೂಡಿಕೆ ಮಾಡಿದ್ದರು.

ಬಳಿಕ ಈ ಬಗ್ಗೆ ಸಂಶಯಗೊಂಡು, ಮೋಸ ಹೋಗುವ ಸಾಧ್ಯತೆಯಿರುವ ಭೀತಿಯಿಂದ ಹಣವನ್ನು ಹಿಂಪಡೆಯಲು ಪ್ರಯತ್ನಿಸಿದಾಗ ಆರೋಪಿಗಳು ಪುನಃ ಹಣ ಹೂಡಿಕೆ ಮಾಡುವಂತೆ ಒತ್ತಾಯಿಸುತ್ತಿದ್ದರು.

ಈ ಕುರಿತು ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

LEAVE A REPLY

Please enter your comment!
Please enter your name here