Home ಸುದ್ದಿಗಳು ಪ್ರೀತಿಸುವ ನಾಟಕವಾಡಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

ಪ್ರೀತಿಸುವ ನಾಟಕವಾಡಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

0
ಪ್ರೀತಿಸುವ ನಾಟಕವಾಡಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ಆರೋಪಿಯ ಬಂಧನ
Close up of male hands in bracelets behind back

ಕಡಬ: ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಜತೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಿದ ಘಟನೆ ನಡೆದಿದೆ.

ಆರೋಪಿಯನ್ನು ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್‌ ನಿವಾಸಿ ಪ್ರವೀಣ್‌ ಪೂಜಾರಿ ಎಂದು ಗುರುತಿಸಲಾಗಿದೆ.

ಆರೋಪಿ ಬಾಲಕಿ ಜತೆಗೆ ಸುತ್ತಾಟ ನಡೆಸಿ ವಿಶ್ವಾಸಗಳಿಸಿ ಬಳಿಕ ಬಾಡಿಗೆ ರೂಂಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಅದರ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಅನೇಕ ಬಾರಿ ಆಕೆಯನ್ನು ಪುತ್ತೂರು ಬಳಿಯ ಬಾಡಿಗೆ ರೂಂಗೆ ಕರೆದೊಯ್ಡು ದೈಹಿಕವಾಗಿ ಬಳಸಿಕೊಂಡಿದ್ದ. ಆಕೆ ಗರ್ಭಿಣಿಯಾಗದಂತೆ ಮಾತ್ರೆಯನ್ನು ತಂದುಕೊಟ್ಟಿದ್ದ.

ಮನೆಯವರಿಗೆ ವಿಷಯ ತಿಳಿಸಿದ್ದ ಬಾಲಕಿಗೆ ಮನೆಮಂದಿ ಧೈರ್ಯ ತುಂಬಿ ಮನೆಗೆ ಕರೆದುಕೊಂಡು ಬಂದಿದ್ದರು. ಯುವಕ ಬೇರೆ ಹುಡುಗಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ಆ ವಿಷಯವನ್ನು ಮುಚ್ಚಿಟ್ಟು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾಗಿ ಬಾಲಕಿ ದೂರಿನಲ್ಲಿ ಆರೋಪಿಸಿದ್ದಾಳೆ.

ದೂರು ಸ್ವೀಕರಿಸಿದ ಕಡಬ ಪೊಲೀಸರು ಸುಳ್ಯದಲ್ಲಿದ್ದ ಯುವಕನನ್ನು ಬಂಧಿಸಿ ಆತನ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

LEAVE A REPLY

Please enter your comment!
Please enter your name here