
ನವದೆಹಲಿ: ಯುಪಿಎ ಅವಧಿಗಿಂತ ಎನ್‌ಡಿಎ ಆಡಳಿತದಲ್ಲಿ 5 ಪಟ್ಟು ಅಧಿಕ ಉದ್ಯೋಗ ಸೃಷ್ಟಿಯಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮನ್ಸೂಖ್ ಮಾಂಡವಿಯಾ ತಿಳಿಸಿದ್ದಾರೆ.
2004-2014ರ ನಡುವಿನ ಕಾಂಗ್ರೆಸ್ ನೇತೃತ್ವದ ಆಡಳಿತದೊಂದಿಗೆ ದತ್ತಾಂಶವನ್ನು ಹೋಲಿಸಿದ ಸಚಿವರು, 2014-15ರಲ್ಲಿ 47.15 ಕೋಟಿ ಇದ್ದ ಉದ್ಯೋಗಕ್ಕೆ ಹೋಲಿಸಿದರೆ 2023-24ರಲ್ಲಿ ಶೇ.36ರಷ್ಟು ಏರಿಕೆಯಾಗಿದೆ.
ಯುಪಿಎ ಅಧಿಕಾರಾವಧಿಯಲ್ಲಿ ಭಾರತದಲ್ಲಿ ಉದ್ಯೋಗವು ಕೇವಲ 7 ಪ್ರತಿಶತದಷ್ಟು ಬೆಳೆದಿದೆ. 2.9 ಕೋಟಿ ಹೆಚ್ಚುವರಿ ಉದ್ಯೋಗ ಸೃಷ್ಟಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮೋದಿ ಸರ್ಕಾರದ ಅಡಿಯಲ್ಲಿ, 2014-24 ರ ನಡುವೆ 17.19 ಕೋಟಿ ಉದ್ಯೋಗಗಳು ಸೃಷ್ಟಿಯಾಗಿವೆ. ದೇಶದಲ್ಲಿ ಸುಮಾರು 4.6 ಕೋಟಿ ಉದ್ಯೋಗಗಳು ಇವೆ ಎಂದು ಮಾಂಡವಿಯಾ ಹೇಳಿದ್ದಾರೆ.
