Home ಸುದ್ದಿಗಳು ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

0
ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ: ಧರ್ಮಸ್ಥಳ ಠಾಣೆ ವ್ಯಾಪ್ತಿಯ ಕೊಕ್ಕಡ ಗ್ರಾಮದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಮಹಮ್ಮದ್‌ ಇಕ್ಬಾಲ್‌ ಮತ್ತು ಮಹಮ್ಮದ್‌ ಶಹಬಾದ ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರ ನೇತೃತ್ವದ ಧರ್ಮಸ್ಥಳ ಪೊಲೀಸ್‌ ಠಾಣಾ ತನಿಖಾ ತಂಡವು ಆರೋಪಿತರನ್ನು ಬಾಡಿ ವಾರೆಂಟ್‌ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ ತನಿಖೆಯನ್ನು ನಡೆಸಿ ಆರೋಪಿಗಳಿಂದ 20 ಸಾವಿರ ರೂ. ಹಣವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿತರ‌ನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

 

LEAVE A REPLY

Please enter your comment!
Please enter your name here