Home ಸುದ್ದಿಗಳು ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದ್ದೀರಿ: ಹೆಚ್.ಡಿ ಕುಮಾರಸ್ವಾಮಿ

ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದ್ದೀರಿ: ಹೆಚ್.ಡಿ ಕುಮಾರಸ್ವಾಮಿ

0
ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದ್ದೀರಿ: ಹೆಚ್.ಡಿ ಕುಮಾರಸ್ವಾಮಿ

ನವದೆಹಲಿ: ದಾಖಲೆ ಕೊಡಿ, ದಾಖಲೆ ಕೊಡಿ ಎನ್ನುತ್ತಿದ್ದಿರಿ. ಇಲ್ನೋಡಿ ಸನ್ಮಾನ್ಯ ಸಿದ್ದರಾಮಯ್ಯನವರೇ, ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿಗೆ ಸಾಕ್ಷಿಗುಡ್ಡೆ. ಪತ್ರಿಕೆಯವರೇ ನಿಮ್ಮ ಸಾಕ್ಷಿಗುಡ್ಡೆಯ ಸಾಕ್ಷಾತ್ಕಾರ ಮಾಡಿಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನಿಮ್ಮ ಸರ್ಕಾರ ಗುತ್ತಿಗೆದಾರರನ್ನು ಎಷ್ಟು ನಿರ್ಲಜ್ಜವಾಗಿ ಸುಲಿಗೆ ಮಾಡುತ್ತಿದೆ ಎನ್ನುವುದಕ್ಕೆ ಈ ಸಾಕ್ಷಿಗುಡ್ಡೆ ಸಾಕ್ಷ್ಯ ಸಾಲದೇ ಮುಖ್ಯಮಂತ್ರಿಗಳೇ. ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ತುಣುಕುಗಳನ್ನು ಟ್ಯಾಗ್ ಮಾಡಿ ಸರ್ಕಾರದ ವಿರುದ್ಧ ಪರ್ಸಂಟೇಜ್ ದಾಳಿ ಮಾಡಿರುವ ಅವರು, ಇಲ್ಲಿದೆ ನೋಡಿ ನಿಮ್ಮ ಲೂಟಿಗೆ ಸಾಕ್ಷಿಗುಡ್ಡೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚೆಂಬು ಹಾಕಿ ಹಂಡೆ ಹೊಡೆದರು ಎನ್ನುವಂತೆ ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದ್ದೀರಿ. ಗುತ್ತಿಗೆದಾರರ 32,000 ಕೋಟಿಯಷ್ಟು ಬಿಲ್ ಬಾಕಿ ಬಿದ್ದಿದೆ. ಈ ಬಾಕಿ ಮೇಲೆ ನಿಮ್ಮ ಪರ್ಸಂಟೇಜ್ ಕರಿನೆರಳು ಕೂಡ ಬಿದ್ದಿದೆ. ಸಾಲ ಮಾಡಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು ದಯಾಮರಣಕ್ಕೆ ಅರ್ಜಿ ಬರೆಯುತ್ತಿದ್ದಾರೆ ಎಂದು ಕೇಂದ್ರ ಕಳವಳ ವ್ಯಕ್ತಪಡಿಸಿದರು.

ಗುತ್ತಿಗೆದಾರರ ಬಿಲ್ ಬಾಕಿ ಪಟ್ಟಿ ನೋಡಿ. ಜಲ ಸಂಪನ್ಮೂಲದಲ್ಲಿ 14,600 ಕೋಟಿ ರೂ, ಲೋಕೋಪಯೋಗಿಯಲ್ಲಿ 10,000 ಕೋಟಿ ರೂ, ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್‌ನಲ್ಲಿ 3,100 ಕೋಟಿ ರೂ, ಸಣ್ಣ ನೀರಾವರಿಯಲ್ಲಿ 2,800 ಕೋಟಿ ರೂ., ಇತರೆ ಇಲಾಖೆಗಳಲ್ಲಿ 1,500 ಕೋಟಿ ರೂ. ಸೇರಿ ಒಟ್ಟು 32,000 ಕೋಟಿ ರೂ. ಬಾಕಿ ಇದೆ ಎಂದು ಹರಿಹಾಯ್ದರು.

 

LEAVE A REPLY

Please enter your comment!
Please enter your name here