
ಆಂಧ್ರಪ್ರದೇಶ: ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಕಾಲ್ತುಳಿತ ಸಂಭವಿಸಿದ ಘಟನೆ ನಡೆದಿದೆ.
ತಿರುಪತಿಯಲ್ಲಿ ದೇವರ ದರ್ಶನಕ್ಕೆ ಟಿಕೆಟ್ ವಿತರಣೆ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ ನಾಲ್ವರು ಭಕ್ತರು ಸಾವನ್ನಪ್ಪಿದ್ದಾರೆ.
ನೂರಾರು ಭಕ್ತರು ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೆಟ್‌ಗಾಗಿ ಮುಗಿಬಿದ್ದಿದ್ದರಿಂದ ಕಾಲ್ತುಳಿತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಿರುಪತಿಯ ವಿಷ್ಣು ನಿವಾಸದ ಬಳಿ ಇರುವ ತಿರುಮಲ ಶ್ರೀವಾರಿ ವೈಕುಂಠ ದ್ವಾರದಲ್ಲಿ ಬುಧವಾರ ರಾತ್ರಿ ಈ ಅವಘಡ ಸಂಭವಿಸಿದ್ದು, ‘ಕಾಲ್ತುಳಿತದಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಸಾವನ್ನಪ್ಪಿದ್ದಾರೆ ಎಂದು ಖಚಿತಪಡಿಸಿದ್ದಾರೆ.
ತಿರುಪತಿ ದೇವಸ್ಥಾನದ ಕಾಲ್ತುಳಿತ ಘಟನೆಯ ಬಗ್ಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
