Home ಸುದ್ದಿಗಳು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ: ಅಪರಿಚಿತ ಕಂಟೇನರ್ ಟ್ರಕ್ ವಿರುದ್ಧ ದೂರು ದಾಖಲು

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ: ಅಪರಿಚಿತ ಕಂಟೇನರ್ ಟ್ರಕ್ ವಿರುದ್ಧ ದೂರು ದಾಖಲು

0
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ: ಅಪರಿಚಿತ ಕಂಟೇನರ್ ಟ್ರಕ್ ವಿರುದ್ಧ ದೂರು ದಾಖಲು

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣದಲ್ಲಿ ಅಪರಿಚಿತ ಕಂಟೇನರ್ ಟ್ರಕ್ ವಿರುದ್ಧ ದೂರು ದಾಖಲಿಸಲಾಗಿದೆ.

ಓವರ್‌ಟೇಕ್ ಮಾಡುವಾಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಆಯ್ತಾ ಎಂದು ಪ್ರಶ್ನೆ ಮೂಡಿದೆ. ಪ್ರಕರಣ ಸಂಬಂಧ ಬೆಳಗಾವಿ ಜಿಲ್ಲೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ನಾನು ಸಚಿವರ ಸರ್ಕಾರಿ ಕಾರು ಚಲಾಯಿಸುತ್ತಿದ್ದೆ. ಕಾರಿನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ, ಸಚಿವರ ಅಂಗರಕ್ಷಕ ಈರಪ್ಪ ಹುಣಶಿಕಟ್ಟಿ ಇದ್ದರು. ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದೆವು. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿಯ ಧಾರವಾಡ-ಬೆಳಗಾವಿ ಮಧ್ಯದ ರಾಷ್ಟ್ರೀಯ ಹೆದ್ದಾರಿ 48ರ ಮೇಲಿದ್ದೆವು. ನಮ್ಮ ಮುಂದೆ ಲೈನ್ 1 ರಲ್ಲಿ ಹೋಗುತ್ತಿದ್ದ ಕಂಟೇನರ್ ಟ್ರಕ್ ಚಾಲಕ ಯಾವುದೇ ಮುನ್ಸೂಚನೆ ಕೊಡದೇ ಎಡಬದಿಗೆ ಬಂದ. ಆಗ ಎಡಬದಿಗೆ ತೆಗೆದುಕೊಂಡರೂ ಟ್ರಕ್ ಚಾಲಕ ಕಾರಿನ ಬಲ ಬದಿಗೆ ತಾಗಿಸಿದ.

ಕಾರು ನಿಯಂತ್ರಣ ತಪ್ಪಿ ಸರ್ವೀಸ್ ರಸ್ತೆಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣ, ಗಂಭೀರ ಗಾಯಗಳಾಗಿವೆ. ಅಪಘಾತ ಮಾಡಿ ವಾಹನ ನಿಲ್ಲಿಸದೇ ಲಾರಿ ಡ್ರೈವರ್ ಹೋಗಿದ್ದಾನೆ ಎಂದು ಸರ್ಕಾರಿ ಕಾರು ಡ್ರೈವರ್‌, ಹಿಟ್ & ರನ್ ಕೇಸ್ ದಾಖಲಿಸಿದ್ದಾರೆ.

ಎಫ್‌ಐಆರ್‌ನಲ್ಲಿ ಎಲ್ಲಿಯೂ ನಾಯಿಗಳು ಅಡ್ಡ ಬಂದ ವಿಚಾರವನ್ನ ಡ್ರೈವರ್‌ ಎಲ್ಲಿಯೂ ಉಲ್ಲೇಖ ಮಾಡಿಲ್ಲ.

 

LEAVE A REPLY

Please enter your comment!
Please enter your name here