
ಮಣಿಪಾಲ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಪಿಎಂ ವಿಶ್ವಕರ್ಮ ಯೋಜನೆಯಡಿ ಫಲಾನುಭವಿಗಳಿಗೆ ಸಾಲಸೌಲಭ್ಯ ಹಾಗೂ ಟೂಲ್‌ಕಿಟ್ ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಚೇರಿಯಲ್ಲಿ ಜರಗಿದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಿಎಂ ವಿಶ್ವಕರ್ಮ ಯೋಜನೆಯಡಿ ಆಯ್ಕೆಯಾದ 6,732 ಫಲಾನುಭಗಳ ಫೈಕಿ 4,864 ಮಂದಿ ತರಬೇತಿ ಪಡೆದಿದ್ದಾರೆ.
ತರಬೇತಿ ಪಡೆದ ಪ್ರತಿಯೊಬ್ಬರಿಗೂ ಸಾಲ ಒದಗಿಸಬೇಕು ಎಂದರು.
ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ರಾವ್, ಕೈಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸೀತಾರಾಮ ಶೆಟ್ಟಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್, ಯೋಜನೆ ಅನುಷ್ಠಾನ ಸಮಿತಿ ನಾಮ ನಿರ್ದೇಶಿತ ಸದಸ್ಯರಾದ ಶ್ರೀನಿಧಿ ಹೆಗ್ಡೆ, ಸುರೇಂದ್ರ ಪಣಿಯೂರು ಉಪಸ್ಥಿತರಿದ್ದರು.
