Home ಸುದ್ದಿಗಳು ಕೆಎಸ್‌ಆರ್‌ಟಿಸಿ ಪ್ರಯಾಣ ದರ ಹೆಚ್ಚಳ: ಮೆಟ್ರೋ ಪ್ರಯಾಣ ದರ ಏರಿಕೆ ಸಾಧ್ಯತೆ

ಕೆಎಸ್‌ಆರ್‌ಟಿಸಿ ಪ್ರಯಾಣ ದರ ಹೆಚ್ಚಳ: ಮೆಟ್ರೋ ಪ್ರಯಾಣ ದರ ಏರಿಕೆ ಸಾಧ್ಯತೆ

0
ಕೆಎಸ್‌ಆರ್‌ಟಿಸಿ ಪ್ರಯಾಣ ದರ ಹೆಚ್ಚಳ:  ಮೆಟ್ರೋ ಪ್ರಯಾಣ ದರ ಏರಿಕೆ ಸಾಧ್ಯತೆ

ಬೆಂಗಳೂರು: ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಪ್ರಯಾಣ ದರ ಏರಿಕೆ ಬೆನ್ನಲ್ಲೆ ಮೆಟ್ರೋ ದರ ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಳೆದ ಏಳು ವರ್ಷದಿಂದ ಮೆಟ್ರೋ ಪ್ರಯಾಣ ದರ ಏರಿಕೆ ಆಗಿರಲಿಲ್ಲ. ಈಗ ದರ ಏರಿಕೆಗೆ ಮುಂದಾಗಿರುವ ಬಿಎಂಆರ್‌ಸಿಎಲ್ ದರ ಏರಿಕೆ ಫೈನಲ್ ಮಾಡುವ ನಿಟ್ಟಿನಲ್ಲಿ ಬೋರ್ಡ್ ಮಿಟಿಂಗ್ ಮಾಡಲಿದೆ.

ಮೆಟ್ರೋ ದರ ಪರಿಷ್ಕರಣೆ ಪ್ರಕ್ರಿಯೆ ಕೊನೆಯ ಹಂತಕ್ಕೆ ತಲುಪಿದೆ. ಈ ಸಂಬಂಧ ಬಿಎಂಆರ್‌ಸಿಎಲ್ ಅಧಿಕಾರಿಗಳ ಮತ್ತು ಫೇರ್ ಹೈಕ್ ಕಮಿಟಿಯ ಸಭೆ ನಡೆಯಲಿದೆ.

ಸದ್ಯ ಈಗಾಗಲೇ ದರ ಏರಿಕೆ ಸಂಬಂಧ ಕಮಿಟಿ 40% ರಿಂದ 45% ಏರಿಕೆಗೆ ಚಿಂತನೆ ನಡೆಸಿದೆ. 2017 ರಲ್ಲಿ ಶೇಕಾಡ 10% -15%ರಷ್ಟು ಮೆಟ್ರೋ ಪ್ರಯಾಣ ದರ ಏರಿಕೆ ಮಾಡಲಾಗಿತ್ತು. ಮುಂದಿನ ದಿನಗಳಲ್ಲಿ ನಮ್ಮ ಮೆಟ್ರೋ ರೈಲು ಮುಂದಿನ ಐದು ವರ್ಷದಲ್ಲಿ 220 ಕಿಮೀ ನಷ್ಟು ವಿಸ್ತರಣೆಯಾಗಲಿದೆ.

ಮೆಟ್ರೋ ಕಾಮಗಾರಿಗಾಗಿ ವಿವಿಧ ಬ್ಯಾಂಕ್, ಏಜೆನ್ಸಿಗಳಿಗೆ ಪಾವತಿಸಬೇಕಾದ ಸಾಲದ ಮೇಲಿನ ಬಡ್ಡಿ, ಪ್ರಸ್ತುತ ರೈಲುಗಳ ಕಾರ್ಯಾಚರಣೆ ವೆಚ್ಚ, ನಿರ್ವಹಣೆ ಮತ್ತು ಸಿಬ್ಬಂದಿ ವೇತನ ಮತ್ತಿತರ ವಿವಿಧ ವೆಚ್ಚ ಪ್ರತಿ ವರ್ಷ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ 15%-20% ರಷ್ಟು ದರ ಏರಿಕೆ ಅನಿವಾರ್ಯ ಎಂಬುದಾಗಿ ಅಧಿಕಾರಿಗಳ ಮಾಹಿತಿ ನೀಡಿದ್ದಾರೆ.

 

LEAVE A REPLY

Please enter your comment!
Please enter your name here