Home ಸುದ್ದಿಗಳು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದ ಬೈಕ್: ವಿದ್ಯಾರ್ಥಿ ಸಾವು

ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದ ಬೈಕ್: ವಿದ್ಯಾರ್ಥಿ ಸಾವು

0
ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದ ಬೈಕ್: ವಿದ್ಯಾರ್ಥಿ ಸಾವು

ಸುಬ್ರಹ್ಮಣ್ಯ: ನಿಯಂತ್ರಣ ತಪ್ಪಿ ಬೈಕ್ ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದ ಘಟನೆ ಇಚ್ಲಂಪಾಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೇರಡ್ಕದಲ್ಲಿ ನಡೆದಿದೆ.

ಈ ಘಟನೆಯಲ್ಲಿ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದಾನೆ.

ಮೃತನನ್ನು ಪೇರಡ್ಕದ ಖಾಸಗಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ, ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಎಂದು ಗುರುತಿಸಲಾಗಿದೆ.

ವಿದ್ಯಾರ್ಥಿ ಮನೆಯಿಂದ ಶಾಲೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಗಾಯಗೊಂಡ ಬಾಲಕನನ್ನು ಕಡಬದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಗಂಭೀರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

 

LEAVE A REPLY

Please enter your comment!
Please enter your name here