
ಮೈಸೂರು: ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಸಂಸದ ಯದುವೀರ್ ಒಡೆಯರ್ ಆಗ್ರಹಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಆರೋಪ ಕೇಳಿ ಬಂದ ದಿನವೇ ನಾವು ಸಿಎಂ ರಾಜೀನಾಮೆ ಕೇಳಿದ್ದೇವು. ಆದರೆ ಸಿಎಂ ತನಿಖೆಯಾಗಲಿ ಎಂದು ಹೇಳುತ್ತಿದ್ದರು. ಇದೀಗ ಇಡಿಯೇ ತನಿಖೆ ಮಾಡಿ ಅಕ್ರಮ ಆಗಿರುವುದು ಬಯಲಿಗೆಳೆದಿದೆ.
ಆ ಕುರಿತು ವರದಿ ಸಹ ಬಿಡುಗಡೆ ಮಾಡಿದೆ. ಈಗಲಾಗದ್ರೂ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದರು.
ಮುಡಾ ಪ್ರಕರಣದಲ್ಲಿ ಸಂಪೂರ್ಣ ತನಿಖೆ ಮುಗಿದ ಮೇಲೆ ತಪ್ಪಿತಸ್ಥರಲ್ಲ ಎಂದು ಸಾಬೀತಾದರೆ ಮತ್ತೆ ಅಧಿಕಾರ ಪಡೆದುಕೊಳ್ಳಲಿ. ಆದರೆ ತನಿಖೆ ಬಳಿಕ ನೋಡೋಣ ಎಂದಿದ್ದ ಸಿಎಂ ಸಿದ್ದರಾಮಯ್ಯನವರು ಇಡಿ ವರದಿ ಬಳಿಕವೂ ರಾಜೀನಾಮೆ ಕೊಡದಿದ್ದರೆ ಹೇಗೆ ಎಂದು ಪ್ರಶ್ನಿಸಿದರು.
