Home ಸುದ್ದಿಗಳು ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

0
ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಮಣಿಪಾಲ್ ರಸ್ತೆಯ ಇಂದ್ರಾಳಿ ಸಮೀಪದ ರೈಲ್ವೇ ಮೇಲ್ಸೇತುವೆ ಅಭಿವೃದ್ಧಿ ಕಾಮಗಾರಿಯನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರೈಲ್ವೇ ಮೇಲ್ಸೇತುವೆಯಾಗಿ ಕಬ್ಬಿಣದ ಗರ್ಡರ್ ನಿರ್ಮಾಣದ ವೆಲ್ಡಿಂಗ್ ಕಾಮಗಾರಿಯ ವೇಗವು ನಿರೀಕ್ಷಿತ ಮಟ್ಟದಲ್ಲಿ ಆಗದೇ ಇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಅದರ ವೇಗವನ್ನು ಮತ್ತಷ್ಟು ಹೆಚ್ಚಿಸಲು ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.

ಕಬ್ಬಿಣದ ಗಡರ್ಸ್ ನಿರ್ಮಾಣದ ಕಾಮಗಾರಿಯು ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಅದನ್ನು ರೈಲ್ವೇ ಹಳಿಗಳ ಮೇಲ್ಭಾಗದಲ್ಲಿ ಸೇತುವೆಯಾಗಿ ನಿರ್ಮಿಸಲು ಅಗತ್ಯವಿರುವ ಸಿವಿಲ್ ಕಾಮಗಾರಿಗಳನ್ನು ಸಹ ತ್ವರಿತವಾಗಿ ಕೈಗೊಳ್ಳುವಂತೆ ಸೂಚನೆ ನೀಡಿದರು.

 

LEAVE A REPLY

Please enter your comment!
Please enter your name here