Home ಸುದ್ದಿಗಳು ಕೋ-ಆಪರೇಟಿವ್ ಸೊಸೈಟಿ ವತಿಯಿಂದ ನವದುರ್ಗಾ ಲೇಖನಯಜ್ಞದ ಸಂಕಲ್ಪ

ಕೋ-ಆಪರೇಟಿವ್ ಸೊಸೈಟಿ ವತಿಯಿಂದ ನವದುರ್ಗಾ ಲೇಖನಯಜ್ಞದ ಸಂಕಲ್ಪ

0
ಕೋ-ಆಪರೇಟಿವ್ ಸೊಸೈಟಿ ವತಿಯಿಂದ ನವದುರ್ಗಾ ಲೇಖನಯಜ್ಞದ ಸಂಕಲ್ಪ

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ, ಗುರುನಿತ್ಯಾನಂದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಾಗೂ ಉಡುಪಿ ಗೃಹ ನಿರ್ಮಾಣ ಸಹಕಾರ ಸಂಘದ ಸಹಭಾಗಿತ್ವದಲ್ಲಿ ಕಾಪು ಹೊಸ ಮಾರಿಗುಡಿ ದೇವಸ್ಥಾನದ ನವದುರ್ಗಾ ಲೇಖನಯಜ್ಞದ ಸಂಕಲ್ಪ ಕಾರ್ಯಕ್ರಮ ನಡೆಯಿತು.

ಬಡಗಬೆಟ್ಟು ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ವಿವಿಧ ಸಹಕಾರ ಸಂಸ್ಥೆಗಳ 9 ಸ್ತ್ರೀಯರು ನವದೀಪವನ್ನು ಪ್ರಜ್ವಲಿಸಿ ದೇವಿಗೆ ಆರತಿ ಬೆಳಗಿಸಿದರು.

ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮನೋಹರ್ ಎಸ್.ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷ ಕೆ.ರಘುಪತಿ ಭಟ್ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿಯಾರು.

ನವದುರ್ಗಾ ಲೇಖನ ಯಜ್ಞ ಸಮಿತಿ ಮಹಿಳಾ ಮುಖ್ಯ ಸಂಚಾಲಕಿ ಗೀತಾಂಜಲಿ ಸುವರ್ಣ, ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ರಾಜೇಶ್ ಹೆಗ್ಡೆ, ಗುರುನಿತ್ಯಾನಂದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ರಾಜೇಶ್ ಶೆಟ್ಟಿ ಹಾಗೂ ಉಡುಪಿ ಗೃಹ ನಿರ್ಮಾಣ ಸಹಕಾರ ಸಂಘದ ಪ್ರಧಾನ ವ್ಯವಸ್ಥಾಪಕ ಅಶೋಕ್ ಭಟ್ ಮೊದಲಾದವರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here