
ನೆಲಮಂಗಲ: ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ-48ರ ಗುಂಡೇನಹಳ್ಳಿ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದೆ.
ಸ್ವಿಫ್ಟ್ ಕಾರು, ಲಾರಿ ಹಾಗೂ ಟೂರಿಸ್ಟ್ ಬಸ್ ಮಧ್ಯೆ ಅಪಘಾತ ಸಂಭವಿಸಿದೆ. ಕಾರು ಲಾರಿ ಕೆಳಗೆ ಸಿಲುಕಿ ನಜ್ಜುಗುಜ್ಜಾದರೂ ಪವಾಡ ರೀತಿಯಲ್ಲಿ ಚಾಲಕ ಪಾರಾಗಿದ್ದಾನೆ.
ಭೀಕರ ಅಪಘಾತದಲ್ಲಿ ತುಮಕೂರು ಜಿಲ್ಲೆಯ ಸೇಲ್ಸ್ ಟ್ಯಾಕ್ಸ್ ಕಚೇರಿಯ ಕಾರು ಚಾಲಕ ಪವಾಡ ರೀತಿಯಲ್ಲಿ ಪಾರಾಗಿದ್ದಾರೆ. ಸಣ್ಣ ಪುಟ್ಟ ಗಾಯಗಳಾಗಿದ್ದು, ಜೀವಕ್ಕೆ ಯಾವುದೇ ಅಪಾಯವಾಗಿಲ್ಲ.
ಮೊದಲು ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿಯೊಡೆದಿದೆ, ಕಾರಿಗೆ ಹಿಂಬದಿಯಿಂದ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ರಸ್ತೆ ಕಾಮಗಾರಿ ಸ್ಥಗಿತಗೊಳಿಸಿರುವುದು ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ನೆಲಮಂಗಲ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
