
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ತಮಿಳುನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ.
ಬಂಧಿತರನ್ನು ಮುಂಬಯಿಯ ಧಾರಾವಿಯ ಡೆಡ್ಲಿ ಗ್ಯಾಂಗ್ ಸೇರಿದ ಮುರುಗನ್ ಡಿ, ಮಣಿವಣ್ಣನ್ ಮತ್ತು ಪ್ರಕಾಶ್ ಅಲಿಯಾಸ್ ಜೋಶ್ವಾ ಎಂದು ಗುರುತಿಸಲಾಗಿದೆ.
ಈ ಬಗ್ಗೆ ಮಂಗಳೂರಿನಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡ ನಂತರ ಹೆಚ್ಚಿನ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಬಳಿ ಮಹಾರಾಷ್ಟ್ರದ ನೋಂದಣಿ ಸಂಖ್ಯೆಯ ಕಾರು, ಶಸ್ತ್ರಾಸ್ತ್ರಗಳು, 2 ತಲವಾರು, 2 ಪಿಸ್ತೂಲುಗಳು ಮತ್ತು ಚಿನ್ನ ಮತ್ತು ಹಣ ತುಂಬಿದ ಗೋಣಿಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ.
