Home ಸುದ್ದಿಗಳು ದರೋಡೆಕೋರರಿಗೆ ರಾಜಕೀಯ ಬೆಂಬಲವಿದೆ: ಬಿಜೆಪಿ ಶಾಸಕ ಭರತ್‌ ಶೆಟ್ಟಿ

ದರೋಡೆಕೋರರಿಗೆ ರಾಜಕೀಯ ಬೆಂಬಲವಿದೆ: ಬಿಜೆಪಿ ಶಾಸಕ ಭರತ್‌ ಶೆಟ್ಟಿ

0
ದರೋಡೆಕೋರರಿಗೆ ರಾಜಕೀಯ ಬೆಂಬಲವಿದೆ: ಬಿಜೆಪಿ ಶಾಸಕ ಭರತ್‌ ಶೆಟ್ಟಿ

ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್‌ ದರೋಡೆಯಲ್ಲಿ ದರೋಡೆಕೋರರಿಗೆ ರಾಜಕೀಯ ಬೆಂಬಲವಿದೆ ಎಂದು ಬಿಜೆಪಿ ಶಾಸಕ ಭರತ್‌ ಶೆಟ್ಟಿ ಆರೋಪ ಮಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದರೋಡೆಯಲ್ಲಿ ಸ್ಥಳೀಯರ ಕೈವಾಡವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಶಾಮೀಲಾದ ಸ್ಥಳೀಯರಿಗೆ ರಾಜಕೀಯ ಬೆಂಬಲವಿದೆ. ದರೋಡೆ ಪ್ರಕರಣದಲ್ಲಿ 100% ಸ್ಥಳೀಯರು ಇರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದೆ. ಈ ಕೃತ್ಯಕ್ಕೆ ಸಹಕಾರ ನೀಡಿದ ನೈಜ ಆರೋಪಿಗಳನ್ನು ಬಯಲಿಗೆ ತನ್ನಿ ಎಂದು ಭರತ್‌ ಶೆಟ್ಟಿ ಸರ್ಕಾರಕ್ಕೆ ಸವಾಲು ಎಸೆದರು.

ದರೋಡೆಕೋರರನ್ನು ಈಗ ಬಂಧಿಸಲಾಗಿದೆ. ಆದರೆ ಪ್ಲಾನಿಂಗ್ ಮಾಡಿದವರನ್ನು, ಕುಮ್ಮಕ್ಕು ನೀಡಿದವರನ್ನು ಯಾರೋ ಬಚಾವ್ ಮಾಡುತ್ತಿದ್ದಾರೆ. ಅವರನ್ನು ರಕ್ಷಣೆ ಮಾಡುವ ಕಾರ್ಯ ನಡೆಯುತ್ತಿದೆ ಎಂದು ದೂರಿದರು.

 

LEAVE A REPLY

Please enter your comment!
Please enter your name here