Home ಸುದ್ದಿಗಳು ರೈಲಿನಲ್ಲಿ ಟೀ ಮಾರುವವನ ಯಡವಟ್ಟಿನಿಂದ 13 ಮಂದಿಯ ಸಾವು

ರೈಲಿನಲ್ಲಿ ಟೀ ಮಾರುವವನ ಯಡವಟ್ಟಿನಿಂದ 13 ಮಂದಿಯ ಸಾವು

0
ರೈಲಿನಲ್ಲಿ ಟೀ ಮಾರುವವನ ಯಡವಟ್ಟಿನಿಂದ 13 ಮಂದಿಯ ಸಾವು

ಮುಂಬೈ: ರೈಲಿನಲ್ಲಿ ಟೀ ಮಾರುವವನ ಯಡವಟ್ಟಿನಿಂದ 13 ಮಂದಿ ಮೃತಪಟ್ಟು 15 ಮಂದಿ ಗಾಯಗೊಂಡ ಘಟನೆ ನಡೆದಿದೆ.

ಲಕ್ನೋ-ಮುಂಬೈ ಪುಷ್ಪಕ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ಯಾಂಟ್ರಿಯಿಂದ ಬಂದ ಟೀ ಮಾರುವವನೊಬ್ಬ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿರುವುದಾಗಿ ಕೂಗಿದ್ದಾನೆ.

ಇದನ್ನು ಕೇಳಿಸಿಕೊಂಡ ಉತ್ತರ ಪ್ರದೇಶದ ಶ್ರಾವಸ್ತಿಯ ಮೂಲದ ಇಬ್ಬರು ಅಲ್ಲಿದ್ದ ಇತರರಿಗೂ ತಿಳಿಸಿದ್ದಾರೆ. ಇದರಿಂದ ಗಾಬರಿಗೊಂಡ ಪ್ರಯಾಣಿಕರು ತಮ್ಮ ರಕ್ಷಣೆಗಾಗಿ ರೈಲಿನ ಅಲಾರಾಂ ಚೈನ್‌ನ್ನು ಎಳೆದು ರೈಲನ್ನು ನಿಲ್ಲಿಸಿದ್ದಾರೆ.

ರೈಲಿನಿಂದ ಇಳಿದ ಪ್ರಯಾಣಿಕರು ಪಕ್ಕದ ರೈಲು ಹಳಿಯ ಮೇಲೆ ನಿಂತಿದ್ದಾರೆ. ಇದೇ ವೇಳೆ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಪ್ರಯಾಣಿಕರು ನಿಂತಿದ್ದ ಹಳಿಯ ಮೇಲೆ ಬಂದಿದೆ.

ಪರಿಣಾಮ ಹಳಿಯ ಮೇಲಿಂದ ಇಳಿಯದೇ ಅಲ್ಲೇ ನಿಂತಿದ್ದವರ ಪೈಕಿ 13 ಮಂದಿ ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಬೆಂಕಿಯಿಂದಾಗಿ ಅಪಘಾತ ಸಂಭವಿಸಿದೆ ಎನ್ನುವುದು ಸುಳ್ಳು ಸುದ್ದಿ ಎಂದು ತಿಳಿದು ಬಂದಿದೆ.

ರೈಲ್ವೆ ಇಲಾಖೆ ಮೃತರ ಕುಟಂಬಸ್ಥರಿಗೆ 1.5 ಲಕ್ಷ ರೂ. ಪರಿಹಾರ ಘೋಷಿಸಿದೆ.

 

LEAVE A REPLY

Please enter your comment!
Please enter your name here