
ಉಡುಪಿ: ಉಡುಪಿ ಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಂದ ಬ್ಯಾಟರಿ ಚಾಲಿತ ವೀಲ್ಹ್‌ಚೇರ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಶೇ.75 ಹಾಗೂ ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲತೆ ಹೊಂದಿರುವ, ಕರ್ನಾಟಕದಲ್ಲಿ ಕನಿಷ್ಠ 10 ವರ್ಷ ವಾಸವಾಗಿದ್ದು, ವಾರ್ಷಿಕ ಆದಾಯ ಎರಡು ಲಕ್ಷ ರೂ.ಗಿಂತ ಕಡಿಮೆ ಇರುವ ಯಂತ್ರಚಾಲಿತ ದ್ವಿಚಕ್ರವಾಹನ ಚಾಲನೆ ಮಾಡಲು ಸಾಮರ್ಥ್ಯ ಹೊಂದಿರದವರು ಅರ್ಜಿ ಸಲ್ಲಿಸಬಹುದಾಗಿದೆ.
ಕನಿಷ್ಠ ಒಂದು ಕೈ, ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿ ಚಾಲಿತ ವೀಲ್ಹ್‌ಚೇರ್ ಚಲಾಯಿಸಲು ಇತರೆ ಎಲ್ಲಾ ರೀತಿಯಲ್ಲಿ ಸದೃಢರಾಗಿರುವವರು ಮಾತ್ರ ಅರ್ಜಿ ಸಲ್ಲಿಸಬಹುದು.
ಈ ಹಿಂದೆ ಸರಕಾರದಿಂದ ಯಂತ್ರಚಾಲಿತ ದ್ವಿಚಕ್ರವಾಹನವನ್ನು ಪಡೆದಿರದ ವಿಕಲಚೇತನರು ಆನ್‌ಲೈನ್ (ಸೇವಾ ಸಿಂಧು, ಕರ್ನಾಟಕ ಒನ್, ಗ್ರಾಮ ಒನ್,ಬೆಂಗಳೂರು ಒನ್) ಮೂಲಕ ಅರ್ಜಿ ಸಲ್ಲಿಸಿದ ನಂತರ ಭೌತಿಕ ಪ್ರತಿಯನ್ನು ಇಲಾಖೆಗೆ ಸಲ್ಲಿಸುವಂತೆ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಳನ್ನು ಇಲಾಖೆಯ ದೂರವಾಣಿ ಸಂಖ್ಯೆ: 0820-2574810/811ಗೆ ಕರೆ ಮಾಡಿ ಪಡೆದುಕೊಳ್ಳಬಹುದು.
ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
