
ನವದೆಹಲಿ: 2008ರ ಮುಂಬೈ ತಾಜ್ ಹೋಟೆಲ್‌ನಲ್ಲಿ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಅಪರಾಧಿ ತಹಾವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಅಮೆರಿಕ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಪಾಕಿಸ್ತಾನಿ ಮೂಲದ ಕೆನಡಾದ ಪ್ರಜೆ ರಾಣಾನನ್ನು ಹಸ್ತಾಂತರಿಸುವಂತೆ ಕೋರಲಾಗಿತ್ತು. ಭಾರತಕ್ಕೆ ಗಡೀಪಾರು ಮಾಡದಿರಲು ರಾಣಾನಿಗೆ ಇದ್ದ ಕೊನೆಯ ಕಾನೂನು ಅವಕಾಶ ಕೈತಪ್ಪಿದ್ದು, ಭಾರತಕ್ಕೆ ಗಡೀಪಾರು ಮಾಡಲು ಅಮೆರಿಕ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.
ಕಳೆದ ವರ್ಷ ನವೆಂಬರ್ 13 ರಂದು ರಾಣಾ ಯುಎಸ್ ಸುಪ್ರೀಂ ಕೋರ್ಟ್‌ನಲ್ಲಿ ಸರ್ಟಿಯೊರಾರಿ ರಿಟ್ ಅರ್ಜಿ ಸಲ್ಲಿಸಿದ್ದನು. ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಒಂದು ದಿನದ ನಂತರ ಜನವರಿ 21 ರಂದು ಸುಪ್ರೀಂ ಕೋರ್ಟ್ ಇದನ್ನು ನಿರಾಕರಿಸಿತು.
ರಾಣಾ ಪ್ರಸ್ತುತ ಲಾಸ್ ಏಂಜಲೀಸ್‌ನ ಮೆಟ್ರೋಪಾಲಿಟನ್ ಡಿಟೆನ್ಷನ್ ಸೆಂಟರ್‌ನಲ್ಲಿ ಬಂಧಿತನಾಗಿದ್ದಾನೆ.
