
ಮಂಗಳೂರು: ಭಾನುವಾರ ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ಗ್ಲಾಸ್ ಸೆಂಟರ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಜಪ್ಪಿನ ಮೊಗರು ಬಳಿ ನಡೆದಿದೆ.
ಬೆಂಕಿ ಕಾಣಿಸಿಕೊಂಡ ಕೆಲವೇ ಕ್ಷಣದಲ್ಲಿ ಇಡೀ ಅಂಗಡಿಯನ್ನು ಭಸ್ಮ ಮಾಡಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಬೆಂಕಿ ನಂದಿಸಲು ಮುಂದಾಗಿದ್ದು, ಅಗ್ನಿ ಶಾಮಕದಳಕ್ಕೂ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಅಗ್ನಿಯ ಕೆನ್ನಾಲಿಗೆಗೆ ಗ್ಲಾಸ್ ಸೆಂಟರ್ನಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ.
ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯುಟ್ ಕಾರಣ ಅಂತ ಹೇಳಲಾಗಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಾಗಿದೆ.
