
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ನೋಟಿಸ್ ಜಾರಿ ಮಾಡಿದೆ.
ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್ ಕರ್ನಾಟಕ ಹೈಕೋರ್ಟ್ನ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.
ಸೋಮವಾರ ಕಲಾಪದ ಕೊನೆಗೆ ವಿಚಾರಣೆ ನಡೆಸುವುದಾಗಿ ನ್ಯಾ.ಎಂ.ನಾಗಪ್ರಸನ್ನ ಒಪ್ಪಿಗೆ ಸೂಚಿಸಿದರು.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು, ಏಜೆಂಟ್ಗಳು ಸೇರಿದಂತೆ ವಿವಿಧ ವ್ಯಕ್ತಿಗಳ ಹೆಸರಿನಲ್ಲಿದ್ದ ಪ್ರಾಪರ್ಟಿ, ನಿವೇಶನ, ಜಮೀನು ಸೇರಿದಂತೆ ಇನ್ನಿತರ ಆಸ್ತಿ ಒಳಗೊಂಡಂತೆ ಅಂದಾಜು 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿತ್ತು.
