
ಉಡುಪಿ: ಶಾಲೆಯ ಆವರಣದಲ್ಲಿ ಜೇನುನೊಣಗಳ ದಾಳಿಯಿಂದ 40 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಗರದ ವೊಳಕಾಡು ಶಾಲೆಯಲ್ಲಿ ನಡೆದಿದೆ.
ಗಾಯಗೊಂಡ ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಶೋಕ್ ಕುಮಾರ್ ತಿಳಿಸಿದ್ದಾರೆ.
ಈ ಪೈಕಿ ಮೂವರು ಮಕ್ಕಳು ನಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿದ್ದು, ಒಬ್ಬ ಪೋಷಕರು ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
37 ವಿದ್ಯಾರ್ಥಿಗಳು ಹೊರರೋಗಿಗಳ ಆರೈಕೆಯನ್ನು ಪಡೆದರು ಮನೆಗೆ ತೆರೆಳಿದರೆ.ಎಲ್ಲಾ ವಿದ್ಯಾರ್ಥಿಗಳ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.
