
ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ ಘಟನೆ ಬೆಂಗಳೂರಿನ ವಿವಿಧೆಡೆ ನಡೆದಿದೆ.
ಈ ಪ್ರಕರಣದಲ್ಲಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, 9 ಮಹಿಳೆಯರ ರಕ್ಷಣೆ ಮಾಡಲಾಗಿದೆ.
ಬಿಇಎಲ್ ಬಡಾವಣೆಯಲ್ಲಿ ಹೈಫೈ ಮನೆ ಬಾಡಿಗೆ ಪಡೆದಿದ್ದ ಆರೋಪಿಗಳು, ಹೊರ ರಾಜ್ಯದಿಂದ ಕೆಲಸಕ್ಕೆ ಬರುವ ಯುವತಿಯರನ್ನೇ ಗುರಿಯಾಗಿಸಿಕೊಂಡು ಅವರಿಗೆ ಕೆಲಸದ ಆಸೆ ತೋರಿಸಿ ವೇಶ್ಯಾವಾಟಿಕೆ ದಂಧೆಗೆ ದೂಡುತ್ತಿದ್ದರು.
ಗಿರಾಕಿಗಳನ್ನು ಫೋನ್ ಮೂಲಕ ಸಂಪರ್ಕಿಸುತ್ತಿದ್ದ ಆರೋಪಿಗಳು, ಅವರನ್ನು ಮನೆಗೆ ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಸಿಸಿಬಿ ಮಹಿಳಾ ಸಂರಕ್ಷಣಾ ಘಟಕದಿಂದ ದಾಳಿ ನಡೆಸಲಾಯಿತು. ಇಬ್ಬರು ಮಹಿಳೆಯರನ್ನೂ ಬಂಧಿಸಲಾಗಿದೆ. ಸದ್ಯ ಬ್ಯಾಡರಹಳ್ಳಿ ಠಾಣೆಯ ಪೊಲೀಸರಿಂದ ತನಿಖೆ ಮುಂದುವರಿದಿದೆ.
