
ಲಕ್ನೋ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ ಹಿನ್ನಲೆ ಇಂದು ಪ್ರಯಾಗರಾಜ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಫೆ.3ರಂದು ಬಸಂತ ಪಂಚಮಿ ಹಿನ್ನೆಲೆ ಮತ್ತೊಂದು ಅಮೃತ ಸ್ನಾನ ನಡೆಯಲಿದೆ. ಈ ಹಿನ್ನೆಲೆ ಯೋಗಿ ಆದಿತ್ಯನಾಥ್ ತಯಾರಿ ಪರಿಶೀಲನೆ ನಡೆಸಲಿದ್ದಾರೆ.
ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯ ಬಗ್ಗೆ ಭಾರೀ ಬೇಸರ ವ್ಯಕ್ತಪಡಿಸಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದಾರೆ.
ಫೆ.1ರಂದು 50ಕ್ಕೂ ಹೆಚ್ಚು ದೇಶಗಳ ಉಪಾಧ್ಯಕ್ಷರು ಹಾಗೂ ರಾಯಭಾರಿಗಳು ಆಗಮಿಸಲಿದ್ದಾರೆ. ಫೆ.5ರಂದು ಪ್ರಧಾನಿ ನರೇಂದ್ರ ಮೋದಿ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲಿದ್ದಾರೆ. ಈ ಹಿನ್ನೆಲೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸುವ ಸಲುವಾಗಿ ಸಿಎಂ ಪರಿಶೀಲನೆ ನಡೆಸಲಿದ್ದಾರೆ.
ಕಾಲ್ತುಳಿತದಲ್ಲಿ ಮೃತಪಟ್ಟ ವ್ಯಕ್ತಿಗಳಿಗೆ ತಲಾ 25 ಲಕ್ಷ ರೂ. ಪರಿಹಾರವನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.
