
ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಮೇಲೆ ಹಲ್ಲೆ ನಡೆಸಿದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಾಂತಿಗ್ರಾಮದ ಬಳಿ ನಡೆದಿದೆ.
ಒಂದು ಕೊಲೆ, ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿಯಾಗಿರುವ ಮನುವನ್ನು (23) ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆತರುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಪೊಲೀಸರು ಹಾಸನಕ್ಕೆ ಕರೆತರುತ್ತಿದ್ದ ವೇಳೆ ಮೂತ್ರ ವಿಸರ್ಜನೆಗೆ ಅನುಮತಿ ನೀಡಬೇಕೆಂದು ಕೇಳಿದ್ದಾನೆ. ಶಾಂತಿಗ್ರಾಮ ಬಳಿ ರಸ್ತೆ ಬದಿ ಜೀಪ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ಅವಕಾಶ ನೀಡಿದಾಗ ಪೊಲೀಸರ ಮೇಲೆಯೇ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.
ಈ ಸಂದರ್ಭದಲ್ಲಿ ಹಾಸನ ನಗರಠಾಣೆ ಇನ್ಸ್‌ಪೆಕ್ಟರ್ ಮೋಹನ್‌ಕೃಷ್ಣ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ನಂತರ ಸಬ್‌ಇನ್ಸ್‌ಪೆಕ್ಟರ್ ಕುಮಾರ್ ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
