
ನವದೆಹಲಿ: ಸೋನಿಯಾ ಗಾಂಧಿ ರಾಷ್ಟ್ರಪತಿಗಳ ಬಗ್ಗೆ ನೀಡಿದ ಹೇಳಿಕೆಗೆ ವ್ಯಕ್ತವಾದ ವಿರೋಧದ ನಡುವೆಯೇ, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ರಾಷ್ಟ್ರಪತಿ ಅಥವಾ ಯಾವುದೇ ನಾಗರಿಕರನ್ನು ಎಂದಿಗೂ ಅವಮಾನಿಸಲು ಸಾಧ್ಯವಿಲ್ಲ. ಸೋನಿಯಾ ಗಾಂಧಿಯವರು ನೀಡಿದ ಹೇಳಿಕೆಯನ್ನು ತಿರಚಲಾಗಿದೆ ಅವಮಾನಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಹೇಳಿದ್ದಾರೆ.
“ಹೊಸ ಸಂಸತ್ತಿನ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿಯನ್ನು ಆಹ್ವಾನಿಸದ ದಿನವೇ ಮೋದಿ ಸರ್ಕಾರವು ರಾಷ್ಟ್ರಪತಿಗಳನ್ನು ಅವಮಾನಿಸಿತು. ಬಿಜೆಪಿ ಉದ್ದೇಶಪೂರ್ವಕವಾಗಿ ನಮ್ಮ ಪ್ರಸ್ತುತ ರಾಷ್ಟ್ರಪತಿ ಮತ್ತು ಹಿಂದಿನ ರಾಷ್ಟ್ರಪತಿಗಳನ್ನು ಪ್ರಜಾಪ್ರಭುತ್ವದ ದೇವಾಲಯ ಮತ್ತು ರಾಮ ಮಂದಿರ ಎರಡರಿಂದಲೂ ದೂರವಿಟ್ಟಿತ್ತು” ಎಂದು ಅವರು ಟೀಕಿಸಿದ್ದಾರೆ
ಏನಿದು ಪ್ರಕರಣ: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಸಂಸತ್ನಲ್ಲಿ ಮಾಡಿದ ಭಾಷಣದ ಬಗ್ಗೆ ಪ್ರತಿಕ್ರಿಯಿಸುವಾಗ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ರಾಷ್ಟ್ರಪತಿಯವನ್ನು ಪೂರ್ ಲೇಡಿ, ಅವರಿಗೆ ಮಾತನಾಡಲೂ ಕಷ್ಟವಾಗುತ್ತಿತ್ತು, ಬಹಳ ಸುಸ್ತಾಗಿದ್ದರು ಎಂದು ಹೇಳಿದ್ದರು.
ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಬಿಜೆಪಿ ಈ ಬಗ್ಗೆ ಕಾಂಗ್ರೆಸ್ ಬೇಷರತ್ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದೆ.
