Home ಸುದ್ದಿಗಳು ರಾಷ್ಟ್ರೀಯ ಜನ ಶಕ್ತಿಯೇ ಸರ್ವಶ್ರೇಷ್ಠ! ದೆಹಲಿಯ ಸರ್ವತೋಮುಖ ಅಭಿವೃದ್ದಿಗೆ ಕಟಿಬದ್ಧ: ಗೆಲುವಿನ ಬಳಿಕ ಪ್ರಧಾನಿ ಮೋದಿ ವಾಗ್ದಾನ!

ಜನ ಶಕ್ತಿಯೇ ಸರ್ವಶ್ರೇಷ್ಠ! ದೆಹಲಿಯ ಸರ್ವತೋಮುಖ ಅಭಿವೃದ್ದಿಗೆ ಕಟಿಬದ್ಧ: ಗೆಲುವಿನ ಬಳಿಕ ಪ್ರಧಾನಿ ಮೋದಿ ವಾಗ್ದಾನ!

0
ಜನ ಶಕ್ತಿಯೇ ಸರ್ವಶ್ರೇಷ್ಠ! ದೆಹಲಿಯ ಸರ್ವತೋಮುಖ ಅಭಿವೃದ್ದಿಗೆ ಕಟಿಬದ್ಧ: ಗೆಲುವಿನ ಬಳಿಕ ಪ್ರಧಾನಿ ಮೋದಿ ವಾಗ್ದಾನ!

ದೆಹಲಿ: ದೆಹಲಿಯಲ್ಲಿ ಭರ್ಜರಿ ಬಹುಮತದಿಂದ ಗೆಲುವನ್ನು ದಾಖಲಿಸಿ ಆಡಳಿತದ ಚುಕ್ಕಾಣಿ ಹಿಡಿಯಲಿರುವ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಎರಡು ದಶಕಗಳ ಬಳಿಕ ದಾಖಲಿಸಿದ ಈ ಪ್ರಚಂಡ ಗೆಲುವಿಗಾಗಿ ದೆಹಲಿಯ ಜನತೆಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದಿದ್ದಾರೆ.

“ಜನ ಶಕ್ತಿಯೇ ಸರ್ವಶ್ರೇಷ್ಠ! ಅಭಿವೃದ್ಧಿ ಗೆಲ್ಲುತ್ತದೆ, ಉತ್ತಮ ಆಡಳಿತ ಜಯಗಳಿಸುತ್ತದೆ. ಈ ಕಿವಿಗಡಚಿಕ್ಕುವ ಮತ್ತು ಐತಿಹಾಸಿಕ ಜನಾದೇಶಕ್ಕಾಗಿ ದೆಹಲಿಯ ನನ್ನ ಪ್ರೀತಿಯ ಸಹೋದರಿಯರು ಮತ್ತು ಸಹೋದರರಿಗೆ ನಾನು ನಮಸ್ಕರಿಸುತ್ತೇನೆ. ಪಕ್ಷವು ವಿನೀತವಾಗಿ ಮತ್ತು ಗೌರವದಿಂದ ಈ ಆಶೀರ್ವಾದವನ್ನು ಸ್ವೀಕರಿಸುತ್ತದೆ.”

“ದೆಹಲಿಯನ್ನು ಅಭಿವೃದ್ಧಿಪಡಿಸುವಲ್ಲಿ, ಜನರ ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುವಲ್ಲಿ ಮತ್ತು ವಿಕಸಿತ ಭಾರತವನ್ನು ನಿರ್ಮಿಸುವಲ್ಲಿ ದೆಹಲಿಯು ಪ್ರಧಾನ ಪಾತ್ರವನ್ನು ವಹಿಸುತ್ತದೆ ಎಂದು ಖಚಿತಪಡಿಸಿಕೊಳ್ಳುವಲ್ಲಿ ನಾವು ಸರ್ವಪ್ರಯತ್ನವನ್ನೂ ಮಾಡುತ್ತೇವೆ ಎಂಬುದು ನಮ್ಮ ಭರವಸೆಯಾಗಿದೆ” ಎಂದಿದ್ದಾರೆ.

ಈ ಭರ್ಜರಿ ಗೆಲುವಿನ ಶ್ರೇಯಸ್ಸನ್ನು ಅವರು ಕಾರ್ಯಕರ್ತರಿಗೆ ಅರ್ಪಿಸಿ, “ಪ್ರತಿಯೊಬ್ಬ ಕಾರ್ಯಕರ್ತನ ಬಗ್ಗೆಯೂ ನನಗೆ ತುಂಬಾ ಹೆಮ್ಮೆ ಇದೆ. ಈ ಮಹೋನ್ನತ ಫಲಿತಾಂಶಕ್ಕಾಗಿ ಕಾರಣಕರ್ತರು ಬಹಳ ಶ್ರಮಿಸಿದ್ದಾರೆ. ನಾವು ಇನ್ನಷ್ಟು ಹುರುಪಿನಿಂದ ಕೆಲಸ ಮಾಡುತ್ತೇವೆ ಮತ್ತು ದೆಹಲಿಯ ಅದ್ಭುತ ಜನರ ಸೇವೆ ಮಾಡುತ್ತೇವೆ” ಎಂದು ಹೇಳಿದ್ದಾರೆ.

 

 

 

LEAVE A REPLY

Please enter your comment!
Please enter your name here