Home ಕರ್ನಾಟಕ ಕರಾವಳಿ ದ.ಕ ಮೀನು ಮಾರಾಟ ಫೆಡರೇಷನ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ದ.ಕ ಮೀನು ಮಾರಾಟ ಫೆಡರೇಷನ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

0
ದ.ಕ ಮೀನು ಮಾರಾಟ ಫೆಡರೇಷನ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮಲ್ಪೆ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್ ನಿ.ಮಂಗಳೂರು ವತಿಯಿಂದ ಶನಿವಾರದಂದು ಮಲ್ಪೆಯಲ್ಲಿ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭದ ನಡೆಯಿತು.

ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ, ಶೈಕ್ಷಣಿಕ ಸಾಧನೆಯಲ್ಲಿ ಉಭಯ ಜಿಲ್ಲೆಗಳೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದು, ವಿದ್ಯಾರ್ಥಿಗಳು ಎಂಜಿನಿಯರಿಂಗ್, ವೈದ್ಯಕೀಯ ಕ್ಷೇತ್ರದ ಜೊತೆ ಜೊತೆಗೆ ಐಎಎಸ್, ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ಮೂಲಕ ಭಾರತೀಯ ಆಡಳಿತ ಸೇವೆಯ ಬಗ್ಗೆಯೂ ಆಸಕ್ತಿ ವಹಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಒಟ್ಟು ₹25 ಲಕ್ಷ ಮೊತ್ತದ ಪ್ರತಿಭಾ ಪುರಸ್ಕಾರವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ, ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಸಿ. ಬಂಗೇರ ಮಾತನಾಡಿದರು.

ಡಾ.ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕಿ ನಿಕೇತನ ಉಪನ್ಯಾಸ ನೀಡಿದರು.

ಮಲ್ಪೆ ಯಾಂತ್ರಿಕ ಟ್ರಾಲ್ ದೋಣಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ರಾಮಚಂದ್ರ ಕುಂದರ್, ಮಲ್ಪೆ ಏಳೂರು ಮೊಗವೀರ ಮಹಾಜನ ಸಂಘದ ಅಧ್ಯಕ್ಷ ರತ್ನಾಕರ ಸಾಲ್ಯಾನ್, ಅಳ ಸಮುದ್ರ ಮೀನುಗಾರಿಕಾ ಪ್ರಾಥಮಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಭಾಷ್ ಮೆಂಡನ್, ಪರ್ಸೀನ್ ಮೀನುಗಾರ ಸಂಘದ ಅಧ್ಯಕ್ಷ ನಾಗರಾಜ ಸುವರ್ಣ, ತಾಂಡೇಲರ ಸಂಘದ ಅಧ್ಯಕ್ಷ ರವಿರಾಜ್ ಸುವರ್ಣ, ಕನ್ನಿ ಮೀನುಗಾರರ ಸಂಘದ ಅಧ್ಯಕ್ಷ ದಯಾಕರ ವಿ. ಸುವರ್ಣ, ಫೆಡರೇಷನ್ ಉಪಾಧ್ಯಕ್ಷ ದೇವಪ್ಪ ಕಾಂಚನ್ ಉಪಸ್ಥಿತರಿದ್ದರು.

ವಿಜೇತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಫೆಡರೇಷನ್ ವ್ಯವಸ್ಥಾಪಕ ನಿರ್ದೇಶಕ ದರ್ಶನ್ ಕೆ.ಟಿ. ವಂದಿಸಿದರು.

 

 

 

LEAVE A REPLY

Please enter your comment!
Please enter your name here