
ಮಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾದೇವಿ ವಾರ್ಡ್‌ನಲ್ಲಿ ನೂತನವಾಗಿ ನಿರ್ಮಿಸಲಾದ ಮಂಗಳಾದೇವಿ ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ವೈದ್ಯ ಚಿಕಿತ್ಸಾಲಯ, ನಗರ ಪಾಲಿಕೆಯ ಮಹಿಳಾ ಸಿಬ್ಬಂದಿಗಳಿಗೆ ವಸತಿ ಗೃಹ ಸಮುಚ್ಚಯ ಹಾಗೂ ಬಸ್ ಟರ್ಮಿನಲ್ ಗಳನ್ನು ಇಂದು ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಮಂಗಳೂರು ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್, ನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್, ಪಾಲಿಕೆಯ ಸದಸ್ಯರು ಮತ್ತು ಸಿಬ್ಬಂದಿಗಳು ಹಾಜರಿದ್ದರು.
