
ಗುರುಪುರ: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ – ದೇವುಪೂಂಜ ಜೋಡುಕರೆ ಕಂಬಳ ಕೂಟವು ತನ್ನ ಸಮಯಪಾಲನೆಯಿಂದ ಗಮನ ಸೆಳೆದಿದೆ. ಕೂಟ ಆರಂಭವಾಗಿ 25 ಗಂಟೆಯೊಳಗೆ ಫೈನಲ್ ಸ್ಪರ್ಧೆ ಮುಗಿದಿದೆ.
13ನೇ ವರ್ಷದ ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ – ದೇವುಪೂಂಜ ಜೋಡುಕರೆ ಕಂಬಳ ಕೂಟದಲ್ಲಿ ಒಟ್ಟು 151 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆ ಹಲಗೆ ವಿಭಾಗದಲ್ಲಿ ಎಂಟು ಜೊತೆ, ಅಡ್ಡಹಲಗೆ ವಿಭಾಗದಲ್ಲಿ ಆರು ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 23 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 23 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 26 ಜೊತೆ ಮತ್ತು ನೇಗಿಲು ಕಿರಿಯ ವಿಭಾಗದಲ್ಲಿ 65 ಜೊತೆ ಕೋಣಗಳು ಭಾಗವಹಿಸಿದ್ದವು.
ಫಲಿತಾಂಶ
ಕನೆ ಹಲಗೆ
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ವಾಮಂಜೂರು ತಿರುವೈಲು ಗುತ್ತು ನವೀನ್ಚಂದ್ರ ಆಳ್ವ
ಹಲಗೆ ಮೆಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
ಅಡ್ಡ ಹಲಗೆ
ಪ್ರಥಮ: ನಾರಾವಿ ಯುವರಾಜ್ ಜೈನ್ (11.10)
ಹಲಗೆ ಮೆಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ (11.98)
ಹಲಗೆ ಮೆಟ್ಟಿದವರು: ಮಂದಾರ್ತಿ ಭರತ್ ನಾಯ್ಕ್
ಹಗ್ಗ ಹಿರಿಯ
ಪ್ರಥಮ: ನಕ್ರೆ ಮಹೋಧರ ನಿವಾಸ ಇಶಾನಿ ತುಕ್ರ ಭಂಡಾರಿ (11.18)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಬಿ” (11.33)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ಹಗ್ಗ ಕಿರಿಯ
ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ “ಬಿ” (11.33)
ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ
ದ್ವಿತೀಯ: ಬೆಳುವಾಯಿ ಉಮನೊಟ್ಟು ಶಿವರಾಮ್ ಹೆಗ್ಡೆ (11.75)
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ನೇಗಿಲು ಹಿರಿಯ
ಪ್ರಥಮ: ಹೊಸ್ಮಾರು ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ (11.18)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಮೂಡಾರ್ ಕೊಂಡಿಬೆಟ್ಟು ಶರಣ್ ಪೂಜಾರಿ (11.33)
ಓಡಿಸಿದವರು: ಆದಿ ಉಡುಪಿ ಜಿತೇಶ್
ನೇಗಿಲು ಕಿರಿಯ
ಪ್ರಥಮ: ಪಡೀಲು ಕಬತ್ತಾರು ಗುತ್ತು ದಿನಕರ್ ಜಯರಾಜ್ ಶೆಟ್ಟಿ “ಎ” (11.18)
ಓಡಿಸಿದವರು: ಬಾರಾಡಿ ನತೀಶ್
ದ್ವಿತೀಯ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಬಿ” (11.39)
ಓಡಿಸಿದವರು: ಸೂರಾಲ್ ಪ್ರದೀಪ್
