
ಶಿವಮೊಗ್ಗ: ಉಡುಪಿಯಿಂದ ಕುಂಭಮೇಳಕ್ಕೆ ತೆರಳುವ ವಿಶೇಷ ರೈಲು ಸಂಪೂರ್ಣ ಭರ್ತಿಯಾಗಿದ್ದು ಮತ್ತೂ ವಿಪರೀತ ಬೇಡಿಕೆ ಇದ್ದ ಹಿನ್ನೆಲೆಯಲ್ಲಿ ಮತ್ತೊಂದು ಅವಕಾಶ ತೆರೆದುಕೊಂಡಿದೆ. ಸಂಸದ ಬಿ.ವೈ ರಾಘವೇಂದ್ರ ಕ್ಷೇತ್ರ ಶಿವಮೊಗ್ಗದಿಂದ ಫೆ.22ಕ್ಕೆ ವಿಶೇಷ ರೈಲು ಪ್ರಯಾಗ್‌ರಾಜ್‌ಗೆ ತೆರಳಲಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮನವಿ ಮಾಡಿದ್ದಾರೆ.
ಇದಲ್ಲದೆ, ಉಡುಪಿಯಿಂದ ತೆರಳುವ ರೈಲು ಸಂಪೂರ್ಣ ಭರ್ತಿಯಾಗಿದ್ದು, ಬೇಡಿಕೆ ಹೆಚ್ಚಾಗಿರುವುದರಿಂದ
ಅದೇ ರೈಲಿಗೆ ಹೆಚ್ಚುವರಿ ಮೂರು ಕೋಚ್‌ಗಳನ್ನು ಅಳವಡಿಸುವಂತೆ ರೈಲ್ವೆ ಇಲಾಖೆಗೆ ಮನವಿ ಮಾಡಿದ್ದು, ಸಕಾರಾತ್ಮಕ ಸುದ್ಧಿಯ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದ್ದಾರೆ.
