Home ಸುದ್ದಿಗಳು ರಾಜ್ಯ ಮದ್ಯದಂಗಡಿಗಳಿಂದ ಶೈಕ್ಷಣಿಕ ಸಂಸ್ಥೆಗಳಿಗೆ ತೊಂದರೆ ಉಂಟಾದಲ್ಲಿ ಅಬಕಾರಿ ಇಲಾಖೆಗೆ ದೂರು ಸಲ್ಲಿಸಿ: ಶಿಕ್ಷಣ ಇಲಾಖೆ

ಮದ್ಯದಂಗಡಿಗಳಿಂದ ಶೈಕ್ಷಣಿಕ ಸಂಸ್ಥೆಗಳಿಗೆ ತೊಂದರೆ ಉಂಟಾದಲ್ಲಿ ಅಬಕಾರಿ ಇಲಾಖೆಗೆ ದೂರು ಸಲ್ಲಿಸಿ: ಶಿಕ್ಷಣ ಇಲಾಖೆ

0
ಮದ್ಯದಂಗಡಿಗಳಿಂದ ಶೈಕ್ಷಣಿಕ ಸಂಸ್ಥೆಗಳಿಗೆ ತೊಂದರೆ ಉಂಟಾದಲ್ಲಿ ಅಬಕಾರಿ ಇಲಾಖೆಗೆ ದೂರು ಸಲ್ಲಿಸಿ: ಶಿಕ್ಷಣ ಇಲಾಖೆ

ಬೆಂಗಳೂರು: ಶೈಕ್ಷಣಿಕ ಸಂಸ್ಥೆಗಳ ಬಳಿ ಮದ್ಯದಂಗಡಿಗಳಿದ್ದು ಇದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯುಂಟಾಗುತ್ತಿದ್ದಲ್ಲಿ ಸಂಬಂಧಪಟ್ಟ ಶೈಕ್ಷಣಿಕ ಸಂಸ್ಥೆಗಳು ಅಬಕಾರಿ ಇಲಾಖೆಗೆ ದೂರು ಸಲ್ಲಿಸುವಂತೆ ಪ್ರೌಢ ಶಿಕ್ಷಣ ಇಲಾಖಾ ನಿರ್ದೇಶಕರು ಎಲ್ಲ ಜಿಲ್ಲೆಗಳ ಉಪ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ಶಾಲೆಗಳು/ಕಾಲೇಜುಗಳ ಬಳಿ ಯಾವುದೇ ಮದ್ಯದಂಗಡಿಗಳಿದ್ದು, ಅವು ಶಿಕ್ಷಣ ಮತ್ತು ಸಂಸ್ಥೆಯ ನಿರ್ವಹಣೆಯಲ್ಲಿ ಸಮಸ್ಯೆಗಳನ್ನು ಉಂಟುಮಾಡಿದರೆ, ಅಬಕಾರಿ ಇಲಾಖೆಗೆ ದೂರು ಸಲ್ಲಿಸುವಂತೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳಿಗೆ ತಿಳಿಸಲಾಗಿದೆ ಮತ್ತು ಅಬಕಾರಿ ಇಲಾಖೆಯು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತದೆ ಎಂದು ಇಲಾಖೆ ತಿಳಿಸಿದೆ.

ಸಾರ್ವಜನಿಕರು, ಶಾಲಾ ಮಕ್ಕಳು ಮತ್ತು ಪೋಷಕರಲ್ಲಿ ಮಾದಕ ವ್ಯಸನದ ಬಗ್ಗೆ ಜಾಗೃತಿ ಮೂಡಿಸಲು ಕ್ರಿಯಾ ಯೋಜನೆಯನ್ನು ರೂಪಿಸಲು ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ, ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಮತ್ತು ಅಬಕಾರಿ ಇಲಾಖೆ ಆಯುಕ್ತರೊಂದಿಗೆ ಸಮನ್ವಯ ಸಾಧಿಸಬೇಕು ಎಂದು ಸೂಚಿಸಿದೆ.

 

 

 

 

LEAVE A REPLY

Please enter your comment!
Please enter your name here