Home ಸುದ್ದಿಗಳು ರಾಷ್ಟ್ರೀಯ ಮುಖ್ಯ ಚುನಾವಣಾ ಆಯುಕ್ತರಾಗಿ ಕೇರಳ ಕೇಡರ್ ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ನೇಮಕ

ಮುಖ್ಯ ಚುನಾವಣಾ ಆಯುಕ್ತರಾಗಿ ಕೇರಳ ಕೇಡರ್ ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ನೇಮಕ

0
ಮುಖ್ಯ ಚುನಾವಣಾ ಆಯುಕ್ತರಾಗಿ ಕೇರಳ ಕೇಡರ್ ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ನೇಮಕ

ನವದೆಹಲಿ: ಆಯ್ಕೆ ಪ್ರಕ್ರಿಯೆಯ ಹೊಸ ಮಸೂದೆಯ ನಂತರ ಪರಿಚಯಿಸಲಾದ ಕೊಲಿಜಿಯಂ ವಿಧಾನದ ಅಡಿಯಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ಹೊಸ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಯಿತು. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ನಿರ್ಗಮನದ ಬಳಿಕ ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಯಿತು.

ಹೊಸ ಕಾನೂನಿನಡಿಯಲ್ಲಿ ಮಾಡಲಾದ ಮೊದಲ ನೇಮಕಾತಿ ಇದಾಗಿದ್ದು, ಮುಖ್ಯ ನ್ಯಾಯಮೂರ್ತಿ ಬದಲಿಗೆ ಗೃಹ ಸಚಿವರನ್ನು ಆಯ್ಕೆ ಸಮಿತಿಯಲ್ಲಿ ನೇಮಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನೊಳಗೊಂಡ ಸಮಿತಿ ಸಭೆ ಬಳಿಕ ಜ್ಞಾನೇಶ್ ಕುಮಾರ್ ಅವರ ಹೆಸರನ್ನು ಅನುಮೋದಿಸಲಾಗಿದೆ.

1988ರ ಬ್ಯಾಚ್‌ನ ಕೇರಳ ಕೇಡರ್‌ನ ಐಎಎಸ್ ಅಧಿಕಾರಿ ಕುಮಾರ್, ಕಳೆದ ವರ್ಷ ಮಾರ್ಚ್‌ನಿಂದ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮುಂದಿನ ಐದು ವರ್ಷಗಳ ಕಾಲ ಮುಖ್ಯ ಚುನಾವಣಾ ಆಯುಕ್ತರಾಗಿ ಕಾರ್ಯನಿರ್ವಹಿಸಲಿದ್ದಾರೆ.

 

 

 

LEAVE A REPLY

Please enter your comment!
Please enter your name here