Home ಕರ್ನಾಟಕ ಕರಾವಳಿ ದೇವಾಲಯಗಳಿಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಉನ್ನತಿ: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ

ದೇವಾಲಯಗಳಿಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಉನ್ನತಿ: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ

0
ದೇವಾಲಯಗಳಿಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಉನ್ನತಿ: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ

ಮಣಿಪಾಲ: ಆಧುನಿಕ ಕಾಲದಲ್ಲಿ ದೇವಸ್ಥಾನಗಳು ಕೇವಲ ಧಾರ್ಮಿಕತೆಗೆ ಸೀಮಿತವಾಗದೆ ಸಾಮಾಜಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಜನರನ್ನು ಬರಮಾಡಿಕೊಳ್ಳುವುದು ಅಗತ್ಯವಾಗಿದೆ. ದೇವಾಲಯಗಳು ಸಂಸ್ಕೃತಿಯನ್ನು ಉಳಿಸುವ ಮತ್ತು ಬೆಳೆಸುವ ಕೆಲಸವನ್ನು ಮಾಡುತ್ತಿವೆ. ದೇವಳದ ಮೂಲಕ ಜನರಿಗೆ ಕೃಷಿ ಸಂಸ್ಕೃತಿಯನ್ನು ಶ್ಲಾಘನೀಯ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು.

ಅವರು ಸೋಮವಾರದಂದು ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಶಿವರಾತ್ರಿಯ ಅಂಗವಾಗಿ ದೇವಳದ ಅಭಿವೃದ್ಧಿ ಟ್ರಸ್ಟ್​ ಹಾಗು ಶಿವಪಾಡಿ ವೈಭವ ಆಚರಣಾ ಸಮಿತಿಯ ವತಿಯಿಂದ ಆಯೋಜಿಸಿರುವ ಯಕ್ಷಗಾನ, ಕೃಷಿ, ಆರೋಗ್ಯ, ಆಹಾರ ಮೇಳ ‘ಶಿವಪಾಡಿ ವೈಭವ” ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಶಾಸಕ ಗುರ್ಮೆ ಸುರೇಶ್​ ಶೆಟ್ಟಿ, ಶಿವಪಾಡಿ ವೈಭವ ಆಚರಣಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಕೆ.ರಘುಪತಿ ಭಟ್​, ದೇವಳದ ಆಡಳಿತ ಮೊಕ್ತೇಸರ ಮಹೇಶ್​ ಠಾಕೂರ್​, ಕೃಷಿ ವಿಜ್ಞಾನಿ ಡಾ. ಶಂಕರ್​, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ನಂಜಪ್ಪ, ಆಸರೆ ಟ್ರಸ್ಟ್​ ಅಧ್ಯಕ್ಷ ಜೈವಿಠಲ್​, ಪರೀಕ ಎಸ್​ಡಿಎಂ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಗೋಪಾಲ ಪೂಜಾರಿ, ದಿವಾಕರ ಭಟ್​, ಮಂಜುನಾಥ್​, ಕಮಲಾಕ್ಷ ಹೆಬ್ಬಾರ್​, ಶಿವಾನಂದ ಪ್ರಭು, ಮಂಜುನಾಥ್​ ಪಾಟೀಲ್​, ಶ್ರೀನಿವಾಸ ಪೂಜಾರಿ, ರತ್ನಾಕರ ರಾವ್​, ವಿಷ್ಣುದಾಸ್​ ಪಾಟೀಲ್​, ಬಾಬು ನಾಯ್ಕ , ದೇವಸ್ಥಾನದ ಶಾಶ್ವತ ಟ್ರಸ್ಟಿ ದಿನೇಶ್​ ಸಾಮಂತ್​, ಟ್ರಸ್ಟಿಗಳಾದ ಸತೀಶ್​ ಪಾಟೀಲ್​, ಶುಭಕರ್​ ಸಾಮಂತ್​, ಪ್ರಕಾಶ್​ ಪ್ರಭು, ಅಶೋಕ್​ ಸಾಮಂತ್​, ಸಾಂಸತಿಕ ಕಾರ್ಯದರ್ಶಿ ನಾಗರಾಜ್​ ಕಾಮತ್​, ಶಿವಪಾಡಿ ವೈಭವ ಆಚರಣಾ ಸಮಿತಿಯ ಪ್ರ.ಕಾರ್ಯದರ್ಶಿ ಪ್ರಕಾಶ್​ ಕುಕ್ಕೆಹಳ್ಳಿ, ದೇವಳದ ಅಭಿವೃದ್ಧಿ ಟ್ರಸ್ಟ್​ನ ಕಾರ್ಯದರ್ಶಿ ಗೋಪಾಲಕೃಷ್ಣ ಪ್ರಭು ಉಪಸ್ಥಿತರಿದ್ದರು.

 

 

LEAVE A REPLY

Please enter your comment!
Please enter your name here