
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೇ ಬಳಕೆದಾರರ ಬಹುಕಾಲದ ಬೇಡಿಕೆಯಾದ ಮಂಗಳೂರಿನಿಂದ ಕಬಕ-ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯಕ್ಕೆ ವಿಸ್ತರಿಸುವ ಪ್ರಸ್ತಾವನೆಗೆ ಕೇಂದ್ರ ರೈಲ್ವೆ ಸಚಿವಾಲಯವು ಅನುಮೋದನೆ ನೀಡಿದೆ.
ಈ ವಿಸ್ತರಣೆಯು ಒಳನಾಡು ಮತ್ತು ಮಂಗಳೂರಿನ ನಡುವಿನ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. ಆ ಮೂಲಕ ಕುಕ್ಕೆ ಸುಬ್ರಹ್ಮಣ್ಯದ ಸುತ್ತಮುತ್ತಲಿನ ಪ್ರದೇಶಗಳನ್ನು ಅಭಿವೃದ್ಧಿಪಡಿಸುತ್ತದೆ ಮತ್ತು ಯಾತ್ರಾರ್ಥಿಗಳಿಗೆ ಮತ್ತು ಸ್ಥಳೀಯ ಜನರಿಗೆ ಅನುಕೂಲಕರ ಪರ್ಯಾಯವನ್ನು ಒದಗಿಸಲಿದೆ.
ಈ ಬಗ್ಗೆ ದ.ಕ ಸಂಸದ ಕೇಂದ್ರ ರೈಲ್ವೆ ಇಲಾಖೆಗೆ ಪತ್ರ ಬರೆದಿದ್ದು, ಇಲಾಖೆಯು ಸಕಾರಾತ್ಮಕವಾಗಿ ಸ್ಪಂದಿಸಿದೆ.
ಎಕ್ಸ್ ಪೋಸ್ಟ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಂಸದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.
Beta feature
