
ಮಂಗಳೂರು/ಉಡುಪಿ: ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದ ಕರಾವಳಿ ಪ್ರದೇಶಗಳಿಗೆ ಬಿಸಿಲಾಘಾತದ ಎಲ್ಲೋ ಅಲರ್ಟ್ ನೀಡಿದ್ದು ಉಭಯ ಜಿಲ್ಲೆಗಳಲ್ಲಿ, ತಾಪಮಾನ ಗಣನೀಯವಾಗಿ ಏರಿಕೆಯಾಗುವ ಎಚ್ಚರಿಕೆಯನ್ನು ನೀಡಿದೆ.
ಫೆಬ್ರವರಿ 26 ಮತ್ತು 27 ರಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣದ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ಗರಿಷ್ಠ ತಾಪಮಾನವು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಉಭಯಜಿಲ್ಲೆಗಳಲ್ಲಿ ತಾಪಮಾನವು ದಿನೇ ದಿನೇ ಹೆಚ್ಚಾಗುತ್ತಿದ್ದು, ಫೆಬ್ರವರಿ 25 ರಂದು,ಮಂಗಳೂರಿನ ಪಣಂಬೂರಿನಲ್ಲಿ 37.2 °C ದಾಖಲಾಗಿದೆ. ಇದು ಸಾಮಾನ್ಯ ತಾಪಮಾನಕ್ಕಿಂತ 3.8°C ಹೆಚ್ಚಾಗಿದೆ. ಮುಂದಿನ ಎರಡು ದಿನಗಳಲ್ಲಿ ಶಾಖವು ಹೆಚ್ಚುವ ನಿರೀಕ್ಷೆ ಇದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
