Home ಕರ್ನಾಟಕ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಎಫೆಕ್ಟ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಎಫೆಕ್ಟ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆ ಏಪ್ರಿಲ್ 17ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಐದು ದಿನಗಳಲ್ಲಿ ಕರವಾಳಿ, ಮಲೆನಾಡು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಮಂಡ್ಯ, ಮೈಸೂರು, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನಲಾಗಿದೆ.

ಈಗಾಗಲೇ ರಾಜ್ಯದ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದು, ಮಳೆಗಾಲ ಆರಂಭಕ್ಕೂ ಮೊದಲೇ ರಾಜ್ಯದ ಇತರ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ.

 
Previous articleಬಿಜೆಪಿಯಿಂದ ಬಸನಗೌಡ ಪಾಟೀಲ ಯತ್ನಾಳ್ ಉಚ್ಚಾಟನೆ
Next articleಮಕ್ಕಳ ನೆನಪಿನ ಶಕ್ತಿಗೆ ಬಾದಾಮಿ ರಾಮಬಾಣ