
ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನವಾಣೆ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ. ಆದರೆ ಪ್ರಭಾವಿ ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಲು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ತಂಡ ಸಂಚು ನಡೆಸಿದೆ ಎನ್ನಲಾಗುತ್ತಿದೆ.
ಏಪ್ರಿಲ್ 26ರಂದು ದ.ಕ. ಸಹಕಾರಿ ಹಾಲು ಒಕ್ಕೂಟ ಚುನಾವಣೆ ನಡೆಯಲಿದ್ದು, ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಸಿದ್ದವಾಗಿದೆ. ಏಪ್ರಿಲ್ 18ರಂದು ನಾಮಪತ್ರ ಪರೀಶೀಲನೆ ನಡೆಯಲಿದೆ. ಆದರೆ ಈ ಮಧ್ಯೆ ಪ್ರಭಾವಿ ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಲು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ತಂಡ ಸಂಚು ನಡೆಸಿದೆ ಎನ್ನಲಾಗಿದೆ.
