
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಮಂಡ್ಯ, ತುಮಕೂರು, ಮೈಸೂರು, ಚಾಮರಾಜ ನಗರ ಸೇರಿದಂತೆ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ನಾಡಿನ ಅನೇಕ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
