
ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ನಿನ್ನೆ ಚಾಲನೆ ದೊರೆತಿದೆ. ಸಿಎಂ ಸಿದ್ದರಾಮಯ್ಯ ಚಾಲನೆ ನೀಡುವ ಮೂಲಕ ಅಧಿಕೃತ ಅನುಮೋದನೆ ನೀಡಿದ್ದಾರೆ. ಈ ಯೋಜನೆಯಡಿ ಮಹಿಳೆಯರು ರಾಜ್ಯದೊಳಗೆ ಎಲ್ಲೇ ಸಂಚರಿಸಿದರೂ ಕೂಡ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಈ ಹಿನ್ನೆಲೆ ಧಾರವಾಢದ ಅಜ್ಜಿಯೊಬ್ಬರು ಬಸ್ ಹತ್ತುವಾಗ ಬಸ್‌ನ ಮೆಟ್ಟಿಲಿಗೆ ನಮಸ್ಕರಿಸಿ ಹತ್ತಿದ್ದಾರೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು ಎಂದು ಹೇಳಿದ್ದಾರೆ.
ಇನ್ನು,ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ.
