ಬೆಂಗಳೂರು: ಕಾಂಗ್ರೆಸ್ ಸರ್ಕಾರ ನೀಡಿರುವ 5ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಕುಟುಂಬದ ಯಜಮಾನಿಗೆ 2000ರೂ ಅನ್ನು ನೀಡಲಾಗುತ್ತದೆ. ಈ ಯೋಜನೆಗೆ ಹಣ ಮಂಜೂರಾತಿ ಮಾಡುವ ಹೊಣೆಯನ್ನು ಶಿಶು ಯೋಜನಾಧಿಕಾರಿಗೆ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಬಗ್ಗೆ ನಡವಳಿಕೆ ಹೊರಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ ನೀಡುವ ಗೃಹಲಕ್ಷ್ಮೀ ಯೋಜನೆಯ ಅರ್ಜಿ ಗಳನ್ನು ಪರಿಶೀಲಿಸಿ, ಮಂಜೂರಾತಿ ನೀಡಲು ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಆದೇಶಿಸಿದೆ.
